
ನವದೆಹಲಿ: ದೆಹಲಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ವಿದ್ಯುತ್ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ದೆಹಲಿ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ 32 ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ ಇದ್ದು, 25ಕ್ಕೂ ಅಧಿಕ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗುತ್ತಿದೆಯಾದರೂ, ತನಿಖೆಯ ಬಳಿಕವಷ್ಟೇ ವರದಿ ಬಹಿರಂಗವಾಗಲಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ನರೇಲಾ ಕೈಗಾರಿಕಾ ಪ್ರದೇಶದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement