ರೋಡ್ ರೋಮಿಯೋಗಳ ವಿರುದ್ಧ ಕ್ರಮ: ಯೋಗಿ ಆದಿತ್ಯನಾಥ್ ಬೆನ್ನಿಗೆ ನಿಂತ ಬಿಜೆಪಿ

ರೋಡ್ ರೋಮಿಯೋಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬೆನ್ನಿಗೆ ಬಿಜೆಪಿ ನಿಂತಿದ್ದು, ನಿರ್ಧಾರಕ್ಕೆ ಭಾನುವಾರ ಬೆಂಬಲವನ್ನು ವ್ಯಕ್ತಪಡಿಸಿದೆ...
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Updated on
ಬೆಂಗಳೂರು: ರೋಡ್ ರೋಮಿಯೋಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬೆನ್ನಿಗೆ ಬಿಜೆಪಿ ನಿಂತಿದ್ದು, ನಿರ್ಧಾರಕ್ಕೆ ಭಾನುವಾರ ಬೆಂಬಲವನ್ನು ವ್ಯಕ್ತಪಡಿಸಿದೆ.
ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು, ಯೋಗಿ ಆದಿತ್ಯನಾಥ್ ಅವರ ನಿರ್ಧಾರ ಹಾಗೂ ಹೇಳಿಕೆಯ ಸರಿಯಾಗಿದೆ. ಆ್ಯಂಟಿ ರೋಮಿಯಾ ಸ್ಕ್ವಾಡ್ ಗಳ ಕಾರ್ಯಾಚರಣೆಯಲ್ಲಿ ಮುಗ್ಧರಿಗೆ ಯಾವುದೇ ಸಮಸ್ಯೆಗಳಾಗುವುದಿಲ್ಲ ಎಂದು ಹೇಳಿದ್ದಾರೆ. 
ಉತ್ತರಪ್ರದೇಶದಲ್ಲಿ ಆ್ಯಂಟಿ ರೋಮಿಯೋ ಸ್ಕ್ವಾಡ್ ಗಳ ಅಗತ್ಯವಿದೆ. ಮಹಿಳೆಯರಿಗೆ, ಯುವತಿಯರಿಗೆ ಹಾಗೂ ದಂಪತಿಗಳಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಕಾರ್ಯಾಚರಣೆಯಿಂದ ಯಾವುದೇ ತಪ್ಪನ್ನು ಮಾಡದ ಜನರಿಗೆ ತೊಂದರೆಗಳು ಎದುರಾಗುವುದಿಲ್ಲ. ಯೋಗಿ ಆದಿತ್ಯನಾಥ್ ಅವರ ಹೇಳಿಕೆಯನ್ನು ತಪ್ಪಾಗಿ ಆರ್ಥೈಸಲಾಗುತ್ತಿದ್ದು, ಸಂಶಯಗಳಿಗೆ ಸ್ಪಷ್ಟನೆ ನೀಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com