ಸಿಂಧ್: ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ 100 ಭಾರತೀಯ ಮೀನುಗಾರರನ್ನು ಪಾಕಿಸ್ತಾನದ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಕಡಲು ಭದ್ರತಾ ಸಂಸ್ಥೆ (ಎಂಎಸ್ಎ) ಅಧಿಕಾರಿಗಳು ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿದ್ದು, 19 ಬೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಕಡಲು ಭದ್ರತಾ ಸಂಸ್ಥೆಯ ಅಧಿಕಾರಿಗಳು ಮೀನುಗಾರರನ್ನು ಪೊಲೀಸರ ವಶಕ್ಕೆ ನೀಡಿದ್ದು, ಮೀನುಗಾರರನ್ನು ಇಂದು ಅಧಿಕಾರಿಗಳು ನ್ಯಾಯಾಲಯ ಮುಂದೆ ಹಾಜರುಪಡಿಸಲಿದ್ದೇವೆಂದು ಹಿರಿಯ ಪೊಲೀಸ್ ಅಧಿಕಾರಿ ಅದೀಲ್ ಚಾಂಡಿಯೋ ಅವರು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸೌಹಾರ್ದತೆಯ ಸಂಕೇತವಾಗಿ 2019 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಬಿಡುಗಡೆ ಮಾಡಿತ್ತು.