ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರದಿಂದ ಹಮ್ಮಿಕೊಳ್ಳಲಾಗುವ ವಿವಿಧ ಕಲ್ಯಾಣ, ಕ್ಷೇಮಾಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯುವುದಕ್ಕೆ ಆಧಾರ್ ಕಾರ್ಡ್ ನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಕೇಂದ್ರ ಸರ್ಕಾರದಿಂದ ಹಮ್ಮಿಕೊಳ್ಳಲಾಗುವ ವಿವಿಧ ಕಲ್ಯಾಣ, ಕ್ಷೇಮಾಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯುವುದಕ್ಕೆ ಆಧಾರ್ ಕಾರ್ಡ್ ನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಾ.27 ರಂದು ಮಹತ್ವದ ಆದೇಶ ಹೊರಡಿಸಿದೆ. 
ಇದೇ ವೇಳೆ ಬ್ಯಾಂಕ್ ಖಾತೆಗಳ ಪ್ರಾರಂಭದಂತಹ ಯೋಜನೆಗಳಿಗೆ ಆಧಾರ್ ಕಾರ್ಡ್ ನ್ನು ಕಾಡ್ಡಾಯಗೊಳಿಸದಂತೆ ಕೇಂದ್ರ ಸರ್ಕಾರವನ್ನೂ ತಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದ್ದು, ಆಧಾರ್ ಕಾರ್ಡ್ ನ್ನು ಕಡ್ಡಾಯಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಲು 7 ಸದಸ್ಯ ಪೀಠವನ್ನು ರಚಿಸಬೇಕು ಆದರೆ ಈ ಸಮಯದಲ್ಲಿ ಅದು ಸಾಧ್ಯವಿಲ್ಲ ಎಂದೂ ಹೇಳಿದೆ. 
ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಾರ್ಡ್ ನ್ನು ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ ಆಧಾರ್ ಇಲ್ಲ ಎಂದ ಮಾತ್ರಕ್ಕೆ ಯಾವೊಬ್ಬ ವ್ಯಕ್ತಿಯೂ ಯೋಜನೆಗಳ ಪ್ರಯೋಜನಗಳಿಂದ ವಂಚಿತನಾಗುವುದಿಲ್ಲ ಎಂಬ ಸ್ಪಷ್ಟನೆ ನೀಡಿತ್ತು. ಆಧಾರ್ ವ್ಯಕ್ತಿಯೊಬ್ಬರಿಗೆ ನೀಡಲಾಗುವ ವಿಶಿಷ್ಟ ಗುರುತಿನ ಸಂಖ್ಯೆಯಾಗಿದ್ದು, ಇದೇ ಸಂಖ್ಯೆಯನ್ನು ಗುರುತನ್ನು ತೋರಿಸುವುದು ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಬಳಕೆ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೇಳಿತ್ತು. 
2015 ರ ಅಕ್ಟೋಬರ್ 15 ರಂದು ನಿರ್ಬಂಧಗಳನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ಮನ್ರೇಗಾ, ಜನ್ ಧನ್ ಯೋಜನೆ, ಎಲ್ ಪಿಜಿ, ಪಿಡಿಎಸ್ ಸೇರಿದಂತೆ ಯಾವುದೇ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ನ ಐಚ್ಚಿಕ ಬಳಕೆಗೆ ಅವಕಾಶ ನೀಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com