ನವದೆಹಲಿ: ಕಲ್ಯಾಣ ಯೋಜನೆಗಳು ಸೇರಿದಂತೆ ಪಾನ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಗೂ ಆಧಾರ ಕಡ್ಡಾಯ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದು, ಆಧಾರ್ ಗೆ ಸಂಬಂಧಿಸಿದಂತೆ ಸರ್ಕಾರ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದು ಈ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸ್ಪಷ್ಟನೆ ನೀಡುಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.