ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸಚಿವ ಫರೂಖ್ ಅಬ್ದ್ರಾಬಿ ಮನೆಗೆ ಶಂಕಿತ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಪೊಲೀಸ್'ಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ದಕ್ಷಿಣ ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿರುವ ಫರೂಖ್ ಅವರ ಮನೆ ಬಳಿ ಬಂದಿರುವ ಶಂಕಿತ ಉಗ್ರರ ತಂಡ ಏಕಾಏಕಿ ಪೊಲೀಸ್ ಮೇಲೆ ದಾಳಿ ಮಾಡಿದ್ದಾರೆ. ನಂತರ ಮನೆಗೆ ನುಗ್ಗಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.
ಅಬ್ದ್ರಾಬಿ ಜಮ್ಮು ಮತ್ತು ಕಾಶ್ಮೀರದ ಹಜ್ ಮತ್ತು ವಕ್ಫ್ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.