ಸಾಮಾನ್ಯವಾಗಿ ಎನ್ ಡಿಎ ಸಭೆಗಳಲ್ಲಿ ಕೇಂದ್ರ ಸಚಿವ ಅನಂತ್ ಗೀತೆ, ಸಂಸದ ಸಂಜಯ್ ರಾವುತ್ ಶಿವಸೇನೆ ಪ್ರತಿನಿಧಿಗಳಾಗಿರುತ್ತಿದ್ದರು. ಆದರೆ ಮಾ.29 ರಂದು ಉದ್ಧವ್ ಠಾಕ್ರೆ ಭಾಗವಹಿಸುವ ಸಾಧ್ಯತೆ ದಟ್ಟವಾಗಿದೆ. ಉತ್ತರ ಪ್ರದೇಶದ ವಿಧಾನಸಭೆಯನ್ನು ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ ತಂಡ ಈಗ ರಾಷ್ಟ್ರಪತಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದ್ದು, ಮಿತ್ರಪಕ್ಷ ಶಿವಸೇನೆಯನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ರಾಷ್ಟ್ರಪತಿ ಚುನಾವಣೆಗಳಲ್ಲಿ ಸಾಮಾನ್ಯವಾಗಿ ಶಿವಸೇನೆ ಎನ್ ಡಿಎ ಅಭ್ಯರ್ಥಿಗಳಿಗೆ ಬೆಂಬಲಿಸಿದೆ.