ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬದ್ಗಾಮ್: ಸೇನಾಪಡೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಉಗ್ರ, ಇಬ್ಬರು ನಾಗರಿಕರ ಸಾವು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಕೇಂದ್ರ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹಾಗೂ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಕೇಂದ್ರ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹಾಗೂ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಕಾಶ್ಮೀರದ ದೀಬ್ರೂಘಡ್ ನ ಚಡೂರಾ ಪ್ರದೇಶದಲ್ಲಿ ಉಗ್ರರು ಅವಿತಿರುವ ಕುರಿತು ಸ್ಪಷ್ಟ ಮಾಹಿತಿ ಪಡೆದ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು ಶೋಧಕಾರ್ಯ ನಡೆಸುತ್ತಿದ್ದರು. ಈ ವೇಳೆ ಉಗ್ರರು ಏಕಾಏಕಿ  ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತ್ಯುತ್ತರವಾಗಿ ಸೇನಾಪಡೆಗಳೂ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಓರ್ವ ಉಗ್ರ ಹಾಗೂ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಅಂತೆಯೇ ನಾಲ್ಕು ಮಂದಿ  ಗಾಯಗೊಂಡಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಸೇನಾಪಡೆಗಳ ಗುಂಡಿಗೆ ಸಾವಿಗೀಡಾದ ಉಗ್ರನ ಗುರುತು ಪತ್ತೆ ಇನ್ನಷ್ಟೇ ನಡೆಯಬೇಕಿದೆ.

ಇನ್ನು ಘಟನಾ ಪ್ರದೇಶದಲ್ಲಿ ಉಗ್ರರು ಮತ್ತು ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಬೇರೆ ಪ್ರದೇಶದಲ್ಲಿ ಅವಿತಿರಬಹುದಾದ ಉಗ್ರರಿಗೆ ಸೇನಾಪಡೆ ಸಿಬ್ಬಂದಿಗಳಿಂದ ಶೋಧಕಾರ್ಯ ನಡೆಸಲಾಗುತ್ತಿದೆ.  ಏತನ್ಮಧ್ಯೆ ಸೈನಿಕರ ಶೋಧಕಾರ್ಯಕ್ಕೆ ಸ್ಥಳೀಯ ನಿವಾಸಿಗಳು ಅಡ್ಡಿಪಡಿಸುತ್ತಿದ್ದು, ಸೇನಾಪಡೆಗಳತ್ತ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಸೇನಾಪಡೆಗಳು ಪೆಲ್ಲೆಟ್ ಗನ್ ಹಾಗೂ ಅಶ್ರುವಾಯ  ಪ್ರಯೋಗ ಮಾಡುತ್ತಿದ್ದಾರೆ.

ಎನ್ ಕೌಂಟರ್ ವೇಳೆ ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Related Stories

No stories found.

Advertisement

X
Kannada Prabha
www.kannadaprabha.com