ಮಾನಸಿಕ ಆರೋಗ್ಯ ಸಮಸ್ಯೆ ಎದುರಿಸುವ ವ್ಯಕ್ತಿಗಳು ಆಸ್ತಿ ಹೊಂದುವ ಅಧಿಕಾರವನ್ನು ನೂತನ ಮಾನಸಿಕ ಆರೋಗ್ಯ ಮಸೂದೆ ಕಲ್ಪಿಸಲಿದೆ. ಜೊತೆಗೆ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ಬಡಲವರು ಮತ್ತು ನಿರಾಶ್ರಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಮಸೂದೆಯ ಪ್ರಕಾರ ಮಾನಸಿಕ ಅಸ್ವಸ್ತರ ಆತ್ಮಹತ್ಯೆಗೆ ಯತ್ನ ಅಪರಾಧವೆನಿಸುವುದಿಲ್ಲ. ಒತ್ತಡದಿಂದ ಈ ನಿರ್ಧಾರ ಕೈಗೊಂಡಿದ್ದಾರೆಂದು ಪರಿಗಣಿಸಿ ಐಪಿಸಿ ಸೆಕ್ಷನ್ 309ರ ಅಡಿ ಶಿಕ್ಷೆ ನೀಡಲಾಗುವುದಿಲ್ಲ. ಅಲ್ಲದೆ, ಮಹಿಳಾ ರೋಗಿಗಳಿಗೆ ವಿಶೇಷ ಚಿಕಿತ್ಸಾ ಸೌಲಭ್ಯಕ್ಕೂ ಮಸೂದೆ ಅವಕಾಶ ಕಲ್ಪಿಸುತ್ತದೆ ಎಂದು ಕೇಂದ್ರ ಆರೋಗ್ಯ ಖಾತೆ ಸಚಿವ ಜೆ.ಪಿ. ನಡ್ಡಾ ಅವರು ಲೋಕಸಭೆಗೆ ತಿಳಿಸಿದರು.