ನೈಜೀರಿಯಾ ವಿದ್ಯಾರ್ಥಿಗಳ ಮೇಲೆ ದಾಳಿ ಪ್ರಕರಣ: ಐವರ ಬಂಧನ; ವರದಿ ಕೇಳಿದ ಸುಷ್ಮಾ ಸ್ವರಾಜ್

ನೊಯ್ಡಾದಲ್ಲಿ ನೈಜೀರಿಯಾ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ಸೂಚಿಸಿದ್ದಾರೆ...
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
Updated on: 
ನವದೆಹಲಿ: ನೊಯ್ಡಾದಲ್ಲಿ ನೈಜೀರಿಯಾ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ಸೂಚಿಸಿದ್ದಾರೆ. 
ನೈಜೀರಿಯಾ ಪ್ರಜೆಗಳ ಮೇಲಿನ ದಾಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಷ್ಮಾ ಸ್ವರಾಜ್ ಅವರು, ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. 
ಪ್ರಕರಣ ಸಂಬಂಧ ಈಗಾಗಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತುಕತೆ ನಡೆಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡುವ ಭರವಸೆಯನ್ನು ನೀಡಿದ್ದಾರೆಂದು ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಸಾವನ್ನಪ್ಪಿದ್ದ. ಅತಿಯಾದ ಮಾದಕ ಸೇವನೆಯೇ ವಿದ್ಯಾರ್ಥಿ ಸಾವಿಗೆ ಕಾರಣ ಎಂದು ಹೇಳಲಾಗಿತ್ತು. 

ಪ್ರಕರಣ ಸಂಬಂಧ ಐವರು ನೈಜಿರಿಯಾ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ನೈಜಿರಿಯ ಪ್ರಜೆಗಳನ್ನು ಬಂಧನಕ್ಕೊಳಪಡಿಸಿದ್ದರು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ನಂತರ ಬಿಡುಗಡೆ ಮಾಡಿದ್ದರು. 

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ 100ಕ್ಕೂ ಹೆಚ್ಚು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ನೊಯ್ಡಾದಲ್ಲಿ ನೆಲೆಸಿರುವ ಅಫ್ರಿಕಾ ಪ್ರಜೆಗಳನ್ನು ಕೂಡಲೆ ಮನೆಗಳನ್ನು ಖಾಲಿ ಮಾಡುವಂತೆ ಆಗ್ರಹಿಸಿದ್ದರು. ನಂತರ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ನಾಲ್ವರು ನೈಜಿರಿಯಾ ವಿದ್ಯಾರ್ಥಿಗಳ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಇದೀಗ ಪ್ರಕರಣ ಸಂಬಂಧ ಪೊಲೀಸರು ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com