ಲಕ್ನೋ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿನ್ನೆ ನಡೆದ ಸಮಾಜವಾದಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ವಿಧಾನಸಭೆ ಮತ್ತು ಪರಿಷತ್ತು ಎರಡೂ ಸದನಗಳ ಪಕ್ಷದ ನಾಯಕರಾಗಿ ಅಖಿಲೇಶ್ ಆಯ್ಕೆಯಾಗಿದ್ದಾರೆ.
ಸಭೆಗೆ ಪಕ್ಷದ ಹಿರಿಯ ನಾಯಕರಾದ ಅಜಂ ಖಾನ್ ಮತ್ತು ಶಿವಪಾಲ್ ಸಿಂಗ್ ಯಾದವ್ ಗೈರುಹಾಜರಾಗಿದ್ದರು.