ಉತ್ತರ ಪ್ರದೇಶ ಮಾದರಿಯಲ್ಲಿ ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನಗಳಲ್ಲೂ ಅಕ್ರಮ ಕಸಾಯಿಖಾನೆಗಳಿಗೆ ಬೀಗ?

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡುತ್ತಿದ್ದಂತೆಯೇ, ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳೂ ಇದೇ ಮಾದರಿಯನ್ನು ಅನುಸರಿಸಲು ಮುಂದಾಗಿವೆ.
ಉತ್ತರ ಪ್ರದೇಶ ಮಾದರಿಯಲ್ಲಿ ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನಗಳಲ್ಲೂ ಅಕ್ರಮ ಕಸಾಯಿಖಾನೆಗಳಿಗೆ ಬೀಗ?
ನವದೆಹಲಿ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡುತ್ತಿದ್ದಂತೆಯೇ, ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳೂ ಇದೇ ಮಾದರಿಯನ್ನು ಅನುಸರಿಸಲು ಮುಂದಾಗಿವೆ. 
ಉತ್ತರ ಪ್ರದೇಶ ಮಾದರಿಯನ್ನು ಅನುಸರಿಸಲು ಮುಂದಾಗಿರುವ ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳು, ಅಕ್ರಮ ಕಸಾಯಿಖಾನೆಗಳಿಗೆ ಬೀಗ ಜಡಿಯುವ ಪ್ರಕ್ರಿಯೆಗೆ ಚಾಲನೆ ನೀಡಿವೆ. ಉತ್ತರ ಪ್ರದೇಶದ ಮಾದರಿಯನ್ನು ಮೊದಲು ಅಳವಡಿಸಿಕೊಂಡ ರಾಜ್ಯ ಜಾರ್ಖಂಡ್ ಆಗಿದೆ. ಹರಿದ್ವಾರದಲ್ಲಿ ಈ ವರೆಗೂ 3 ಮಾಂಸದ ಅಂಗಡಿಗಳು ಬಂದ್ ಆಗಿದ್ದರೆ, ಇಂದೋರ್, ರಾಯ್ ಪುರಗಳಲ್ಲಿ 11  ಕಸಾಯಿಖಾನೆಗಳನ್ನು ಬಂದ್ ಮಾಡಿಸಲಾಗಿದೆ. 
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ ಜೈಪುರದಲ್ಲಿ 4000 ಅಕ್ರಮ ಕಸಾಯಿಖಾನೆಗಳು ಮುಚ್ಚಲ್ಪಡುತ್ತವೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಜೈಪುರ ಪುರ ಸಭೆ ಈಗಾಗಲೇ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಿಸಲು ಸಿದ್ಧತೆನಡೆಸಿದ್ದು, 4000 ಕಸಾಯಿಖಾನೆಗಳು, ಮಾಂಸದ ಅಂಗಡಿಗಳನ್ನು ಅಕ್ರಮ ಎಂದು ಗುರುತಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com