ರಾಷ್ಟ್ರಪತಿ ಹುದ್ದೆ ರೇಸ್ ನಲ್ಲಿ ಇಲ್ಲ: ಮೋಹನ್ ಭಾಗ್ವತ್

ತಾವು ರಾಷ್ಟ್ರಪತಿ ಹುದ್ದೆಯ ರೇಸ್ ನಲ್ಲಿ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್ )ನ ಮುಖ್ಯಸ್ಥ ಮೋಹನ್ ಭಾಗ್ವತ್ ಸ್ಪಷ್ಟನೆ ನೀಡಿದ್ದಾರೆ.
ಮೋಹನ್ ಭಾಗ್ವತ್
ಮೋಹನ್ ಭಾಗ್ವತ್
ಮುಂಬೈ: ತಾವು ರಾಷ್ಟ್ರಪತಿ ಹುದ್ದೆಯ ರೇಸ್ ನಲ್ಲಿ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್ )ನ ಮುಖ್ಯಸ್ಥ ಮೋಹನ್ ಭಾಗ್ವತ್ ಸ್ಪಷ್ಟನೆ ನೀಡಿದ್ದಾರೆ. 
ಮೋಹನ್ ಭಾಗ್ವತ್ ರಾಷ್ಟ್ರಪತಿಯಾಗಬೇಕೆಂಬ ಶಿವಸೇನೆ ಪಕ್ಷದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೋಹನ್ ಭಾಗ್ವತ್, ರಾಷ್ಟ್ರಪತಿ ಹುದ್ದೆಯ ರೇಸ್ ನಲ್ಲಿ ನಾನು ಇಲ್ಲ. ನನ್ನ ಹೆಸರು ರಾಷ್ಟ್ರಪತಿ ಹುದ್ದೆಗೆ ಕೇಳಿಬರುತ್ತಿದೆ ಎಂದು ಒಂದಷ್ಟು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅವು ಕೇವಲ ವದಂತಿಯಷ್ಟೇ, ನಾನು ಇರುವುದು ಆರ್ ಎಸ್ ಎಸ್ ನ ಕೆಲಸ ಮಾಡಲು ಅಷ್ಟೇ ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ. 
ಒಂದು ವೇಳೆ ರಾಷ್ಟ್ರಪತಿ ಹುದ್ದೆಗೆ ನನ್ನ ಹೆಸರು ಸೂಚಿಸಿದರೂ ಅದನ್ನು ಒಪ್ಪುವುದಿಲ್ಲ ಎಂದು ಮೋಹನ್ ಭಾಗ್ವತ್ ಸ್ಪಷ್ಟನೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com