ಆಪ್ ನಿಂದ 97 ಕೋಟಿ ವಸೂಲು ಮಾಡಲು ಮುಖ್ಯ ಕಾರ್ಯದರ್ಶಿಗೆ ಲೆಫ್ಟಿನೆಂಟ್ ಗೌರ್ನರ್ ಸೂಚನೆ

ದೆಹಲಿ ಆಮ್ ಆದ್ಮಿ ಪಕ್ಷದಿಂದ 97 ಕೋಟಿ ರೂಪಾಯಿಗಳನ್ನು ವಾಪಸ್ ಪಡೆಯುವಂತೆ ದೆಹಲಿ ಲೆಫ್ಟಿನೆಂಟ್ ಗೌರ್ನರ್ ಸೂಚನೆ
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ಜಾಹೀರಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ದೆಹಲಿ ಆಮ್ ಆದ್ಮಿ ಪಕ್ಷದಿಂದ 97 ಕೋಟಿ ರೂಪಾಯಿಗಳನ್ನು ವಾಪಸ್ ಪಡೆಯುವಂತೆ ದೆಹಲಿ ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಲ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಬೃಹತ್ ಮೊತ್ತವನ್ನು ಜಾಹೀರಾತುಗಳಿಗೆ ಖರ್ಚು ಮಾಡಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಕ್ಷದ ಪರ ಪ್ರಚಾರ ನಡೆಸಲು ಜಾಹೀರಾತುಗಳಿಗಾಗಿ ಖರ್ಚು ಮಾಡಿರುವುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕು ಎಂದು ಲೆಫ್ಟಿನೆಂಟ್ ಗೌರ್ನರ್ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಲೆಫ್ಟಿನೆಂಟ್ ಗೌರ್ನರ್ ಆದೇಶದಿಂದ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆಯುಂಟಾಗಿದ್ದು, ಬೃಹತ್ ಮೊತ್ತವನ್ನು ಒಂದೇ ತಿಂಗಳಲ್ಲಿ ಹಿಂತಿರುಗಿಸಬೇಕಿದೆ. 
ಕೇಂದ್ರದಿಂದ ನಿಯುಕ್ತಿಗೊಂಡಿದ್ದ ತ್ರಿಸದಸ್ಯ ಸಮಿತಿ ಆಮ್ ಆದ್ಮಿ ಪಕ್ಷ ಜಾಹೀರಾತುಗಳಿಗಾಗಿ ಸರ್ಕಾರದ ಬೊಕ್ಕಸವನ್ನು ದುರುಪಯೋಗಪಡಿಸಿಕೊಂಡಿದೆ ದೋಷಾರೋಪಣೆ ಸಲ್ಲಿಸಿದ್ದ ಬೆನ್ನಲ್ಲೇ ಲೆಫ್ಟಿನೆಂಟ್ ಗೌರ್ನರ್ ಈ ಆದೇಶ ನೀಡಿದ್ದಾರೆ. ಒಟ್ಟು 97 ಕೋಟಿ ರೂಪಾಯಿಗಳ ಪೈಕಿ 42 ಕೋಟಿ ರೂಪಾಯಿಗಳನ್ನು ಜಾಹೀರಾತು ಏಜೆನ್ಸಿಗಳಿಗೆ ನೀಡಾಲಾಗಿದೆ, ಉಳಿದ 55 ಕೋಟಿ ರೂಪಾಯಿಗಳನ್ನು ಇನ್ನಷ್ಟೇ ಪಾವತಿ ಮಾಡಬೇಕಿದ್ದು ಆಮ್ ಆದ್ಮಿ ಪಕ್ಷ ಪಾವತಿ ಮಾಡಾಲಿದೆ ಎಂದು ತಿಳಿದುಬಂದಿದೆ. ದೆಹಲಿಯ ಹೊರಗಡೆಯೂ ಪ್ರಚಾರ ಪಡೆಯಲು ಆಮ್ ಆದ್ಮಿ ಪಕ್ಷ 29 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿರುವುದು ಸಿಎಜಿ ವರದಿಯಲ್ಲೂ ಬಹಿರಂಗವಾಗಿದ್ದು, ಜಾಹೀರಾತು ವಿಷಯದಲ್ಲಿ ಆಪ್ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂಬ ಆರೋಪ ಕೇಳಿಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com