ತ್ರಿವಳಿ ತಲಾಖ್ ಪ್ರಕರಣ 5 ಸದಸ್ಯರ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ; ಮೇ 11 ರಿಂದ ವಿಚಾರಣೆ

ತ್ರಿವಳಿ ತಲಾಖ್ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 5 ಸದಸ್ಯರ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದ್ದು, ಮೇ.11 ರಿಂದ ವಿಚಾರಣೆ ಪ್ರಾರಂಭವಾಗಲಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ತ್ರಿವಳಿ ತಲಾಖ್ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 5 ಸದಸ್ಯರ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದ್ದು, ಮೇ.11 ರಿಂದ ವಿಚಾರಣೆ ಪ್ರಾರಂಭವಾಗಲಿದೆ. 
ಪಂಚ ಸದಸ್ಯ ಪೀಠಕ್ಕೆ ತ್ರಿವಳಿ ತಲಾಖ್ ಪ್ರಕರಣವನ್ನು ವರ್ಗಾಯಿಸುವ ಬಗ್ಗೆ ಸುಪ್ರೀಂ ಕೋರ್ಟ್ ಕಳೆದ ತಿಂಗಳೇ ಸುಳಿವು ನೀಡಿತ್ತು. ತ್ರಿವಳಿ ತಲಾಖ್ ಕಾನೂನು ಬಾಹೀರವಾಗಿದ್ದು, ಅಲ್ಪಸಂಖ್ಯಾತ ಮಹಿಳೆಯರ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂಬ ಬಗ್ಗೆ ದೇಶಾದ್ಯಂತ ಚರ್ಚೆ ನಡೆದಿತ್ತು. ತ್ರಿವಳಿ ತಲಾಖ್ ಪದ್ಧತಿಯನ್ನು ವಿರೋಧಿಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಲಿಂಗ ತಾರತಮ್ಯವನ್ನು, ಸಹಿಸುವುದಿಲ್ಲ ಎಂದು ಕೋರ್ಟ್ ಗೆ ಹೇಳಿದೆ. 
ಇನ್ನು ನಿಖಾಹ್ ಹಲಾಲ್ ( ಒಬ್ಬ ಪುರುಷ ತನ್ನ ವಿಚ್ಛೇದಿತ ಪತ್ನಿಯನ್ನು ಪುನಃ ವಿವಾಹವಾಗಬೇಕಾದರೆ, ಆಕೆ ಬೇರೊಬ್ಬರೊಂದಿಗೆ ಎರಡನೇ ಮದುವೆಯಾಗಿರಬೇಕು ಎಂಬ ಪದ್ಧತಿ) ಕುರಿತಾಗಿಯೂ ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ. ತ್ರಿವಳಿ ತಲಾಖ್ ಪರವಾಗಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಾದಿಸುತ್ತಿದ್ದು, ತ್ರಿವಳಿ ತಲಾಖ್ ನ್ನು ರದ್ದುಗೊಳಿಸಿದರೆ ಅದು ಕುರಾನ್ ಗೆ ಮಾಡುವ ಅಪಚಾರವಾಗಿದೆ ಎಂದು ಹೇಳುತ್ತಿದೆ. 
ಇವೆಲ್ಲವೂ ತೀರಾ ಮುಖ್ಯವಾದ ವಿಷಯಗಳು, ಅವಸರ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೀಸ್ ಖೇಹರ್, ನ್ಯಾ.ಎನ್ ವಿ ರಮಣ, ನ್ಯಾ. ಡಿವಿ ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಕಳೆದ ತಿಂಗಳು ಹೇಳಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com