ಸೇನಾ ಕಾವಲುಪಡೆ ಮೇಲೆ ಉಗ್ರರ ಗುಂಡಿನ ದಾಳಿ, ಇಬ್ಬರು ಯೋಧರಿಗೆ ಗಾಯ

ಶ್ರೀನಗರದ ಪರಿಂಪೋರಾ-ಪಂತ್ ಚೌಕ್ ಬೈಪಾಸ್ ರಸ್ತೆಯಲ್ಲಿರುವ ಆಸ್ಪತ್ರೆ ಸಮೀಪ ಸೇನಾ ಕಾವಲುಪಡೆ ಮೇಲೆ ಶನಿವಾರ ಉಗ್ರರು....
ಸೇನಾ ಕಾವಲುಪಡೆ ಮೇಲೆ ಉಗ್ರರ ದಾಳಿ
ಸೇನಾ ಕಾವಲುಪಡೆ ಮೇಲೆ ಉಗ್ರರ ದಾಳಿ
ಶ್ರೀನಗರ: ಶ್ರೀನಗರದ ಪರಿಂಪೋರಾ-ಪಂತ್ ಚೌಕ್ ಬೈಪಾಸ್ ರಸ್ತೆಯಲ್ಲಿರುವ ಆಸ್ಪತ್ರೆ ಸಮೀಪ ಸೇನಾ ಕಾವಲುಪಡೆ ಮೇಲೆ ಶನಿವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 1.15ರ ಸುಮಾರಿಗೆ ಉಗ್ರರು ಸ್ಕಿಮ್ಸ್ ಆಸ್ಪತ್ರೆ ಬಳಿ ಸೇನಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಉಗ್ರರ ದಾಳಿಯ ಬೆನ್ನಲ್ಲೇ ಕೆಲ ದುಷ್ಕರ್ಮಿಗಳು ಪೊಲೀಸರ ಮೇಲೆ ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಉಗ್ರರ ದಾಳಿಯಲ್ಲಿ ಕಾವಲುಪಡೆಯ ಕೊನೆಯ ವಾಹನದಲ್ಲಿದ್ದ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಸೇನಾ ಕಾವಲುಪಡೆ ಪರಿಂಪೋರಾದಿಂದ ಪಂತ್ ಚೌಕ್ ಗೆ ತೆರಳುತ್ತಿದ್ದ ವೇಳೆ ಈ ದಾಳಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಉಗ್ರರಿಗಾಗಿ ಸೇನೆ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com