ಜಾತೀಯತೆ,ಓಲೈಕೆ ರಾಜಕಾರಣ ಅಂತ್ಯ, ಅಭಿವೃದ್ಧಿ, ರಾಷ್ಚ್ರೀಯತೆಗೆ ಆದ್ಯತೆ: ಯೋಗಿ ಆದಿತ್ಯನಾಥ್

ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ದೇಶಾದ್ಯಂತ ಎಲ್ಲರ ಹುಬ್ಬೇರುವಂತೆ ಮಾಡಿದೆ. ಜಾತಿ ರಾಜಕೀಯ, ಮತ್ತು ಓಲೈಕೆ ರಾಜಕಾರಣ ..
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಕ್ನೋ: ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ದೇಶಾದ್ಯಂತ ಎಲ್ಲರ ಹುಬ್ಬೇರುವಂತೆ ಮಾಡಿದೆ. ಜಾತಿ ರಾಜಕೀಯ, ಮತ್ತು ಓಲೈಕೆ ರಾಜಕಾರಣ ಅಂತ್ಯಗೊಂಡಿದ್ದು, ಕೇವಲ ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ಮಾತ್ರ ಮುಂದುವರಿಯಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ವಿರೋಧ ಪಕ್ಷಗಳು ಬಿಜೆಪಿಯನ್ನು ಕೋಮುವಾದಿ ಮತ್ತು ಅಸ್ಪೃಶ್ಯರು ಎಂಬಂತೆ ಬಿಂಬಿಸುತ್ತಿವೆ. ಆದರೆ ಪಕ್ಷ ಜನ ಕಲ್ಯಾಣಕ್ಕೆ ಬದ್ಧವಾಗಿದೆ ಎಂಬುದನ್ನು ಅರಿತುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಲಕ್ನೋದಲ್ಲಿ ನಡೆದ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೊಸ ಅಬಕಾರಿ ನೀತಿ ರೂಪಿಸಲಿದೆ, ಅದರ ಅಡಿಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಮತ್ತು ಶೈಕ್ಷಣಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಳ ಪಕ್ಕ ಸಾರಾಯಿ ಅಂಗಡಿ ಇರದಂತೆ ನೀತಿ ನಿಯಮ ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಹಾಗೂ ಮಹಿಳಾ ರಕ್ಷಣೆಗೆ ಪ್ರಥಮ ಆದ್ಯತೆ ನೀಡಲಾಗುವುದು, ಹೀಗಾಗಿ 24 ಗಂಟೆಗಳು ರೋಮಿಯೋ ಸ್ಕ್ವಾಡ್ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com