ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಅಧ್ಯಕ್ಷರು, ಬಿಜೆಪಿಯ ಈ ಗೆಲುವಿನ ಕೀರ್ತಿ ಬೂತ್ ಮಟ್ಟದ ಕಾರ್ಯಕರ್ತರಿಗೆ ಸಲ್ಲಬೇಕು ಎಂದರು. ಅಲ್ಲದೆ ರಾಷ್ಟ್ರ ರಾಜಧಾನಿಯ ಜನಾದೇಶ ಇಡೀ ದೇಶದ ತೀರ್ಪು ಆಗಿದ್ದು, ಭಾರತ ಜನತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇದ್ದಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದಿದ್ದಾರೆ.