ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಯೋಧನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬುಧವಾರ ನಡೆದಿದೆ.
ಗಡಿ ನಿಯಂತ್ರಣ ರೇಖೆ ಲಾಮ್ ಸೆಕ್ಟರ್ ಬಳಿ ಬಂದಿರುವ ಯೋಧ ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.
ಲ್ಯಾನ್ಸ್ ನಾಯ್ಕ್ ವಿಶಾಲ್ ಲೋಹರ್ (33) ಎಂಬ ಯೋಧ ಆತ್ಮಹತ್ಯೆಗೆ ಶರಣಾಗಿದ್ದು, ಇವರು ಕರ್ನಾಟಕ ಮೂಲದವರಾಗಿದ್ದಾರೆಂದು ಹೇಳಲಾಗುತ್ತಿದೆ. ವಿಶಾಲ್ ಅವರು 51 ರಾಷ್ಟ್ರೀಯ ರೈಫಲ್ಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಯೋಧನ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಲಯ ತನಿಖೆಗೆ ಆದೇಶಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ತನಿಖೆ ಆರಂಭಿಸಿದ್ದಾರೆ.