ಸರ್ಕಾರ ಬಳೆಯನ್ನು ಕಳಚಿಟ್ಟು ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಲಿ: ಕಾಂಗ್ರೆಸ್

ಸರ್ಕಾರ ಕೈಗೆ ಹಾಕಿಕೊಂಡಿರುವ ಬಳೆಗಳನ್ನು ಕಳಚಿಟ್ಟು ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್, ಆಗ್ರಹಿಸಿದೆ.
ಕಾಂಗ್ರೆಸ್
ಕಾಂಗ್ರೆಸ್
Updated on: 
ನವದೆಹಲಿ: ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಯಾವುದೇ ನೀತಿಯನ್ನು ಹೊಂದಿಲ್ಲ ಎಂದು ಟೀಕಿಸಿರುವ ಕಾಂಗ್ರೆಸ್, ಸರ್ಕಾರ ಕೈಗೆ ಹಾಕಿಕೊಂಡಿರುವ ಬಳೆಗಳನ್ನು ಕಳಚಿಟ್ಟು ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. 
ಪಾಕಿಸ್ತಾನದ ಯೋಧರು ಭಾರತೀಯ ಯೋಧರ ಶಿರಚ್ಛೇಧ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಕೇಂದ್ರ ಸರ್ಕಾರ ಯೋಧರಿಗೆ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಲು ಮುಕ್ತ ಹಸ್ತ ನೀಡಬೇಕು ಎಂದು ಒತ್ತಾಯಿಸಿದೆ. 
ಯೋಧರ ಶಿರಚ್ಛೇಧವಾದರೂ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ನಮ್ಮ ಯೋಧರ ಶಿರಚ್ಛೇಧಕ್ಕೆ ಪ್ರತಿಯಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಎಷ್ಟು ಪಾಕಿಸ್ತಾನಿಯರ ತಲೆಗಳನ್ನು ತರುತ್ತದೆ ಎಂದು ಪ್ರಶ್ನಿಸಿದ್ದಾರೆ. 
ಯುಪಿಎ ಸರ್ಕಾರದ ಅವಧಿಯಲ್ಲಿ ಭಾರತೀಯ ಯೋಧರ ಶಿರಚ್ಛೇಧವಾದಾಗ ಒಂದು ತಲೆಗೆ 10 ತಲೆಗಳನ್ನು ತೆಗೆಯಬೇಕು ಎಂದು ಹೇಳಿದ್ದ ಸುಷ್ಮಾ ಸ್ವರಾಜ್ ಅವರ ಹೇಳಿಕೆಯನ್ನು ಹಾಗೂ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬಳೆಯನ್ನು ಕಳಿಸಿಕೊಟ್ಟಿದ್ದ ಪ್ರಕರಣವನ್ನು ಉಲ್ಲೇಖಿಸಿರುವ ಕಪಿಲ್ ಸಿಬಲ್, ಸುಷ್ಮಾ ಸ್ವರಾಜ್ ಅವರು ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಳೆಗಳನ್ನು ಕಳಿಸಿಕೊಡುತ್ತಾರಾ? ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com