ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ಗೆ ಭೇಟಿ ನೀಡಿದ್ದು, ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
Updated on
ಕೇದಾರನಾಥ್: ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ಗೆ ಭೇಟಿ ನೀಡಿದ್ದು, ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. 
6 ತಿಂಗಳ ನಂತರ ಕೇದಾರನಾಥ ದೇವಾಲಯ ತೆರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಳಿಗ್ಗೆ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಉತ್ತರಾಖಂಡ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಕೆಕೆ ಪೌಲ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸ್ವಾಗತಿಸಿದರು. 
ಹಿಮಾಲಯದ ದೇವಾಲಯಗಳ ಪೈಕಿ ಕೇದಾರನಾಥ ದೇವಾಲಯ ಪ್ರಮುಖ ದೇವಾಲಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಮುನ್ನ ದೇವಾಲಯಕ್ಕೆ ತೆರಳಿದ್ದ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಸಿದ್ಧತೆಗಳನ್ನು ಪರಿಶೀಲಿಸಿದ್ದರು. ಉತ್ತರಾಖಂಡ್ ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಹರಿದ್ವಾರದಲ್ಲಿ ಪತಂಜಲಿ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com