ಮನೋಜ್ ತಿವಾರಿ ಮನೆ ಮೇಲೆ ದಾಳಿ ಪ್ರಕರಣ: ದೆಹಲಿ ಪೊಲೀಸ್ ಅಧಿಕಾರಿ ಅಮಾನತು
ದೆಹಲಿ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಮನೋಜ್ ತಿವಾರಿ ಅವರ ಮನೆ ಮೇಲೆ ದಾಳಿಯಾದ ಪ್ರಕರಣಕ್ಕೆ ಸಂಬಂಧಿಸಿದೆಂತೆ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ...
ನವದೆಹಲಿ: ದೆಹಲಿ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಮನೋಜ್ ತಿವಾರಿ ಅವರ ಮನೆ ಮೇಲೆ ದಾಳಿಯಾದ ಪ್ರಕರಣಕ್ಕೆ ಸಂಬಂಧಿಸಿದೆಂತೆ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.
ತಿವಾರಿ ಮನೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ತನಿಖೆ ಮುಂದುವರೆದಿದ್ದು, ತನಿಖೆ ಪೂರ್ಣಗೊಳ್ಳುವವರೆಗೂ ದೆಹಲಿ ಪೊಲೀಸ್ ಸಹಾಯಕ ಸಬ್ ಇನ್ಸ್'ಪೆಕ್ಟರ್'ನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ
ಮನೋಜ್ ತಿವಾರಿ ಮನೆ ಮೇಲೆ ದುಷ್ಕರ್ಮಿಗಳ ತಂಡವೊಂದು ಕೆಲ ದಿನಗಳ ಹಿಂದಷ್ಟೇ ದಾಳಿ ನಡೆಸಿತ್ತು. ಘಟನೆಯಲ್ಲಿ ತಿವಾರಿ ಮನೆಯಲ್ಲಿದ್ದ ಇಬ್ಬರು ಸಿಬ್ಬಂದಿಗಳಿಗೆ ಗಾಯವಾಗಿತ್ತು. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ಮೊದಲು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದರು.