ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲು ಅಜಯ್ ಮಾಕೇನ್ ಗೆ ರಾಹುಲ್ ಸೂಚನೆ: ರಾಜಿನಾಮೆ ವಾಪಸ್

ದೆಹಲಿ ಮುನಿಸಿಪಲ್ ಚುನಾವಣೆಯಲ್ಲಿ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ಅಜಯ್ ಮಾಕೇನ್ ವಾಪಸ್ ಪಡೆದಿದ್ದಾರೆ. ...
ಅಜಯ್ ಮಾಕೇನ್
ಅಜಯ್ ಮಾಕೇನ್
ನವದೆಹಲಿ: ದೆಹಲಿ ಮುನಿಸಿಪಲ್ ಚುನಾವಣೆಯಲ್ಲಿ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ಅಜಯ್ ಮಾಕೇನ್ ವಾಪಸ್ ಪಡೆದಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿದ್ದ ರಾಜಿನಾಮೆ ಪತ್ರವನ್ನು ಹಿಂಪಡೆದಿರುವುದಾಗಿ ಅವರು ಹೇಳಿದ್ದಾರೆ,
ಅಜಯ್ ಮಾಕೇನ್ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಕೂಡ ರಾಜಿನಾಮೆ ರವಾನಿಸಿದ್ದರು, ಆದರೆ 2015ರ ದೆಹಲಿ ವಿಧಾನಸಭೆ ಚುನಾವಣೆಗೆ ಹೋಲಿಸಿದರೇ ಈ ಬಾರಿ ಮತ ಹಂಚಿಕೆಯಲ್ಲಿ ಏರಿಕೆಯಾಗಿದೆ. ಹೀಗಾಗಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ರಾಹುಲ್ ಗಾಂಧಿ ಹೇಳಿದ್ದಾರೆ. ಹೀಗಾಗಿ ರಾಜಿನಾಮೆ ಹಿಂಪಡೆದಿರುವುದಾಗಿ ಅಜಯ್ ಮಾಕೇನ್ ತಿಳಿಸಿದ್ದಾರೆ.
ದೆಹಲಿ ವಿಧಾನ ಸಭೆ ಚುನಾವಣೆಯಲ್ಲಿ ಶೇ.9 ರಷ್ಟು ಮತ ಬಂದಿತ್ತು, ಆದರೆ ಈ ವೇಳೆ ಅದು ಶೇ.22 ಕ್ಕೇರಿದೆ. ಹೀಗಾಗಿ ದೆಹಲಿಯಲ್ಲಿ ಪಕ್ಷವನ್ನು ನಂಬರ್ ಒನ್ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ರಾಹುಲ್ ಗಾಂಧಿ ಹೇಳಿದ್ದಾರೆಂದು ಅವರು ತಿಳಿಸಿದ್ದಾರೆ. 
ದೆಹಲಿ ಮುನಿಸಿಪಾಲ್ ಕಾರ್ಪೋರೇಷನ್ ಚುನಾವಣೆಯಿಂದ ಸಾಂಪ್ರಾದಾಯಿಕ ಕಾಂಗ್ರೆಸ್ಸಿಗರು ತಮ್ಮ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬುದು ತಿಳಿದು ಬಂದಿದೆ ಎಂದು ಮಾಕೇನ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com