ಕಾಶ್ಮೀರ ಭಾರತ-ಪಾಕ್ ನಡುವಿನ ವಿವಾದ, ಮಧ್ಯಸ್ಥಿಕೆ, ಹಸ್ತಕ್ಷೇಪ ಮಾಡುವುದಿಲ್ಲ: ಚೀನಾ

ತನ್ನ ವರಸೆ ಬದಲಿಸಿಕೊಂಡಿರುವ ಚೀನಾ, ಕಾಶ್ಮೀರ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎನ್ನಲು ಪ್ರಾರಂಭಿಸಿದೆ.
ಕಾಶ್ಮೀರ
ಕಾಶ್ಮೀರ
ಬೀಜಿಂಗ್: ಕಾಶ್ಮೀರ ವಿವಾದ ಬಗೆಹರಿಸುವಲ್ಲಿ ಚೀನಾ ಈಗ ತನ್ನ ಹಿತಾಸಕ್ತಿಯನ್ನು ಹೊಂದಿದೆ ಎಂದು ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮ ಗ್ಲೋಬಲ್ ಟೈಮ್ಸ್ ಹೇಳಿದ್ದ ಬೆನ್ನಲ್ಲೇ ತನ್ನ ವರಸೆ ಬದಲಿಸಿಕೊಂಡಿರುವ ಚೀನಾ, ಕಾಶ್ಮೀರ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎನ್ನಲು ಪ್ರಾರಂಭಿಸಿದೆ. 
ಕಾಶ್ಮೀರ ವಿವಾದ ಭಾರತ-ಪಾಕಿಸ್ತಾನ ನಡುವಿನ ವಿವಾದವಾಗಿದ್ದು, ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಚೀನಾ ಹೇಳಿದ್ದು, ಸಿಪಿಇಸಿಗಾಗಿ ಕಾಶ್ಮೀರಕ್ಕೆ ಸಂಬಂಧಿಸಿದಂತೆ ತನ್ನ ನಿಲುವನ್ನು ಬದಲಾವಣೆ ಮಾಡಿಕೊಳ್ಳುವುದಿಲ್ಲ ಎಂದು ಚೀನಾ ವಿದೇಶಾಂಗ ಸಚಿವರು ಹೇಳಿದ್ದಾರೆ. 
ಕಾಶ್ಮೀರದ ವಿಷಯವಾಗಿ ಚೀನಾದ ನಿಲುವು ಸ್ಥಿರ ಹಾಗೂ ಸ್ಪಷ್ಟವಾಗಿದೆ. ಕಾಶ್ಮೀರ ವಿವಾದ ಭಾರತ-ಪಾಕಿಸ್ತಾನಕ್ಕೆ ಸಂಬಂಧಿಸಿದ ವಿಷಯವಾಗಿದೆ. ಅದನ್ನು ಭಾರತ-ಪಾಕಿಸ್ತಾನ ಮಾತ್ರ ಬಗೆಹರಿಸಿಕೊಳ್ಳಬೇಕಿದೆ ಎಂದು ಚೀನಾ ವಿದೇಶಾಂಗ ಸಚಿವರು ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನ-ಭಾರತ ನಡುವೆ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ರಾಷ್ಟ್ರಗಳು ಮಧ್ಯಸ್ಥಿಕೆ ವಹಿಸುವುದಕ್ಕೆ ಭಾರತ ವಿರೋಧ ವ್ಯಕ್ತಪಡಿಸುತ್ತಿದೆ. ಆದರೆ ಕಳೆದ ವಾರ ಚೀನಾದ ಸರ್ಕಾರಿ ಸ್ವಾಮ್ಯದ ಪತ್ರಿಕೆ ಕಾಶ್ಮೀರ ವಿವಾದವನ್ನು ಬಗೆಹರಿಸುವಲ್ಲಿ ಚೀನಾ ತನ್ನ ಹಿತಾಸಕ್ತಿ ಹೊಂದಿದೆ ಎಂದು ಹೇಳಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com