ರಾಷ್ಟ್ರಪತಿ ಚುನಾವಣೆಗೆ ಯಾವುದೇ ಜಾತ್ಯಾತೀತ ಮೈತ್ರಿಗೆ ಎಸ್ ಪಿ ಬೆಂಬಲ: ಅಖಿಲೇಶ್ ಯಾದವ್

ರಾಷ್ಟ್ರಪತಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಯಾವುದೇ ಜಾತ್ಯಾತೀತ ಮೈತ್ರಿಕೂಟಕ್ಕೆ ಬೆಂಬಲ ನೀಡಲಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
ಲಖನೌ: ರಾಷ್ಟ್ರಪತಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಯಾವುದೇ ಜಾತ್ಯಾತೀತ ಮೈತ್ರಿಕೂಟಕ್ಕೆ ಬೆಂಬಲ ನೀಡಲಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. 
ಎನ್ ಡಿಎ ಅಭ್ಯರ್ಥಿ ವಿರುದ್ಧ ಜಾತ್ಯಾತೀತ ಮೈತ್ರಿಕೂಟದ ಅಭ್ಯರ್ಥಿ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಾದರೆ ಮೈತ್ರಿಕೂಟವನ್ನು ಸಮಾಜವಾದಿ ಪಕ್ಷ ಬೆಂಬಲಿಸಲಿದೆ ಎಂದಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಗೆ ವಿರುದ್ಧವಾಗಿ ಮತ್ತೋರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿದೆ ಇದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾತ್ಯಾತೀತ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಸಿಪಿಐಎಂ ಮುಖಂಡ ಸೀತಾರಾಮ್ ಯೆಚೂರಿ ಅಭಿಪ್ರಾಯಪಟ್ಟಿದ್ದರು. ಈ ಬೆನ್ನಲ್ಲೇ ಲಾಲೂ ಪ್ರಸಾದ್ ಯಾದವ್ ಸಹ ರಾಷ್ಟ್ರಪತಿ ಚುನಾವಣೆಗೆ ಮಹಾಮೈತ್ರಿಯ ಅನಿರ್ವಾರ್ಯತೆ ಇದೆ ಎಂದಿದ್ದರು. 
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಹಲವು ಪಕ್ಷಗಳ ನಾಯಕರು ರಾಷ್ಟ್ರಪತಿ ಚುನಾವಣೆಗೆ ಮೈತ್ರಿಕೂಟ ರಚಿಸಿ ಬಿಜೆಪಿಗೆ ಪರ್ಯಾಯವಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಹೇಳಿದ್ದಾರೆ. ಈ ಬೆನ್ನಲ್ಲೇ ಉತ್ತರ ಪ್ರದೇಶ ಮಾಜಿ ಸಿಎಂ, ಎಸ್ ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಸಹ ಪ್ರತಿಕ್ರಿಯೆ ನೀಡಿದ್ದು, ಜಾತ್ಯಾತೀತ ಪಕ್ಷಗಳಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com