ಉ.ಪ್ರದೇಶ ಅಭಿವೃದ್ಧಿಗೆ ರೂ.1.2,000 ಕೋಟಿ ಬಿಡುಗಡೆ ಮಾಡಿದ ಕೇಂದ್ರ

ಅಖಿಲ ಭಾರತ ಅಭಿವೃದ್ಧಿ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರ ಉತ್ತರಪ್ರದೇಶ ರಾಜ್ಯ ಅಭಿವೃದ್ಧಿಗಾಗಿ ರೂ.1,263 ಕೋಟಿ ಹಣವನ್ನು ಶುಕ್ರವಾರ ಬಿಡುಗಡೆ ಮಾಡಿದೆ...
ಕೇಂದ್ರ ನಗರಾಭಿವೃದ್ಧಿ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ವೆಂಕಯ್ಯ ನಾಯ್ಡು
ಕೇಂದ್ರ ನಗರಾಭಿವೃದ್ಧಿ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ವೆಂಕಯ್ಯ ನಾಯ್ಡು
ಲಖನೌ: ಅಖಿಲ ಭಾರತ ಅಭಿವೃದ್ಧಿ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರ ಉತ್ತರಪ್ರದೇಶ ರಾಜ್ಯ ಅಭಿವೃದ್ಧಿಗಾಗಿ ರೂ.1,263 ಕೋಟಿ ಹಣವನ್ನು ಶುಕ್ರವಾರ ಬಿಡುಗಡೆ ಮಾಡಿದೆ. 
ಕೇಂದ್ರ ನಗರಾಭಿವೃದ್ಧಿ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ವೆಂಕಯ್ಯ ನಾಯ್ಡು ಅವರು ಉತ್ತರಪ್ರದೇಶ ರಾಜ್ಯದ ಅಭಿವೃದ್ಧಿಗಾಗಿ ಹಣವನ್ನು ಬಿಡುಗಡೆ ಮಾಡಿದ್ದಾರೆ. 
ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಅಭಿವೃದ್ಧಿ ಕಾಣುತ್ತಿದೆ. ರಾಜ್ಯದ ಅಭಿವೃದ್ಧಿ ಕೂಡ ಶೀಘ್ರಗತಿಯಲ್ಲಿ ಆಗುತ್ತಿದೆ. ಈ ಹಿಂದಿದ್ದ ಸರ್ಕಾರ ಕೇಂದ್ರದೊಂದಿಗೆ ಸರಿಯಾದ ರೀತಿಯಲ್ಲಿ ಸಹಕಾರ ನೀಡುತ್ತಿರಲಿಲ್ಲ ಎಂಬುದು ನಿಜಕ್ಕೂ ದುರಾದೃಷ್ಟಕರ ಸಂಗತಿ. ನಾನು ಯಾವುದೇ ಪಕ್ಷಧ ಮೇಲೆ ಆರೋಪ ಮಾಡುವುದಕ್ಕೆ ಇಷ್ಟಪಡುವುದಿಲ್ಲ. ಏಕೆಂದರೆ, ಅಂತಹವರಿಗೆ ಜನರೇ ಸರಿಯಾದ ರೀತಿಯಲ್ಲಿ ಬುದ್ಧಿ ಕಲಿಸಿದ್ದಾರೆದು ಹೇಳಿದ್ದಾರೆ. 
ಯೋಗಿ ಆದಿತ್ಯನಾಥ್ ಸರ್ಕಾರ ಉತ್ತಮ ಹಾದಿಯಲ್ಲಿ ಸಾಗುತ್ತಿದೆ. 'ಬಿಮಾರು" ರಾಜ್ಯದಿಂದ ಉತ್ತರಪ್ರದೇಶವನ್ನು ಹೊರಗೆ ತರುವುದು ನಮ್ಮ ಸರ್ಕಾರ ಮುಖ್ಯ ಉದ್ದೇಶವಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡುತ್ತಿದ್ದು, ರೂ. 1,263 ಕೋಟಿ ಪೈಕಿ ರೂ.119 ಕೋಟಿ ಲಖನೌ, ರೂ.107 ಕೋಟಿ ಆಗ್ರಾ, ಕಾನ್ಪುರ, ವಾರಣಾಸಿ ಅಭಿವೃದ್ಧಿಗೆ ಹಾಗೂ ರೂ.2 ಕೋಟಿ ಹಣನನ್ನು ಮೀರುತ್ ಮತ್ತು ರಯಿ ಬರೇಲಿಗೆ ನೀಡಲಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com