ಮೇ.04 ರಂದು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಸ್ವಚ್ಛ ಸರ್ವೇಕ್ಷಣೆಯ ಫಲಿತಾಂಶಗಳನ್ನು ಪ್ರಕಟಿಸಿತ್ತು. ಸ್ವಚ್ಛ ನಗರಗಳ ಪಟ್ಟಿಯಲ್ಲಿ ಇಂದೋರ್ ಹಾಗೂ ಭೋಪಾಲ್ ಸ್ಥಾನ ಪಡೆದಿತ್ತು. ಆದರೆ ಉತ್ತರ ಪ್ರದೇಶ ಸ್ವಚ್ಛತೆಯ ವಿಷಯದಲ್ಲಿ ಸಾಕಷ್ಟು ಸುಧಾರಣೆ ಕಾಣಬೇಕಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕಿದ್ದು, ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೊರಕೆ ಹಿಡಿದು ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ