ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ 2 ಪೊಲೀಸರು ಮತ್ತು ಇಬ್ಬರು ನಾಗರಿಕರು ಬಲಿಯಾಗಿರುವ ಘಟನೆ ನಡೆದಿದೆ.
2 ಭಾರತೀಯ ಯೋಧರ ಶಿರಚ್ಛೇದ ಮಾಡಿದ್ದ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ಸಿಡಿದೆದ್ದಿತ್ತು. ಉಗ್ರರ ಹುಟ್ಟಡಗಿಸುವ ಸಲುವಾಗಿ ಕಾಶ್ಮೀರದ ಹಲವೆಡೆ ಮನೆ ಮನೆಗೆ ತೆರಳಿ ಶೋಧ ಕಾರ್ಯ ನಡೆಸಿದ್ದರು. ಇದರ ಬೆನ್ನಲ್ಲೇ ಕುಲ್ಗಾಂ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ದಾಳಇ ನಡೆಸಿದ್ದಾರೆ.
ಉಗ್ರರ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಓರ್ವ ಉಗ್ರರನ್ನು ಹೊಡೆದುರುಳಿಸಿದೆ. ಹತ್ಯೆಯಾದ ಉಗ್ರನನ್ನು ಫಯಾಜ್ ಅಹಮದ್ ಅಲಿಯಾಸ್ ಸೇಥಾ ಎಂದು ಗುರ್ತಿಸಲಾಗಿದೆ. ಈತ ಉಧಂಪುರ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳಕ್ಕೆ ಬೇಕಾದ ಉಗ್ರನಾಗಿದ್ದ.