ಎನ್'ಡಿಎ ಸರ್ಕಾರಕ್ಕೆ 3 ವರ್ಷ: ಮೇ.26ಕ್ಕೆ ಜನತೆಯನ್ನುದ್ದೇಶಿ ಮೋದಿ ಭಾಷಣ
ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಪೂರೈಸುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ.26 ರಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ...
ನವದೆಹಲಿ: ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಪೂರೈಸುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ.26 ರಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮೊದಲ ಬಾರಿಗೆ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಭ್ರವನ್ನಾಚರಿಸಲಿದೆ.
ಈ ಕುರಿತಂತೆ ಮಾತನಾಡಿರುವ ಅಸ್ಸಾಂ ರಾಜ್ಯದ ಬಿಜೆಪಿ ಘಟಕದ ಅಧ್ಯಕ್ಷ ರಂಜೀತ್ ಕುಮಾರ್ ದಾಸ್ ಅವರು, ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಮೂರನೇ ವರ್ಷ ಪೂರೈಸುತ್ತಿದ್ದು, ಇದೇ ಸಂಭ್ರಮದ ದಿನಾಚರಣೆಯಂದು ಅಸ್ಸಾಂ ರಾಜ್ಯದಲ್ಲಿ ಸಂಭ್ರಮವನ್ನು ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಗುವಾಹಟಿಯಿಂದ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತನಾಡಲಿದ್ದು, ಇದು ಈಶಾನ್ಯ ಭಾಗದ ಮೇಲೆ ಕೇಂದ್ರಕ್ಕಿರುವ ಬದ್ಧತೆಯನ್ನು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.
ಇದೇ ದಿನದಂದು ಪ್ರಧಾನಿ ಮೋದಿಯವರು ಧೋಲಾ ಸಾದಿಯಾ ಸೇತುವೆ ಮತ್ತು ಎರಡು ಸಂಸ್ಥೆಗಳಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ.