ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆ: ಹವಾಮಾನ ಇಲಾಖೆ ವರದಿ!

ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯಾಗದಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ವರದಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯಾಗದಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ವರದಿ ನೀಡಿದೆ.

ಎಲ್ ನಿನೋ ಪರಿಣಾಮದಂದಾಗಿ ಭಾರತದಲ್ಲಿ ಈ ಬಾರಿ ಉತ್ತಮ ಮಳೆಯಾಗಲಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೇಂದ್ರ ಹವಾಮಾನ ಇಲಾಖೆ  ಮುಖ್ಯಸ್ಥರು ಮಂಗಳವಾರ ಈ ಬಗ್ಗೆ ವರದಿ ನೀಡಿದ್ದು, ಈ ಬಾರಿ ಮಾನ್ಸೂನ್ ಮಳೆ ಉತ್ತಮವಾಗಿರಲಿದ್ದು, ಕೃಷಿ ಉದ್ಯಮಕ್ಕೆ ನೆರವಾಗಲಿದೆ. ಆ ಮೂಲಕ ಆರ್ಥಿಕಾಭಿವೃದ್ಧಿಯಲ್ಲೂ ಗಮನಾರ್ಹ ಬೆಳವಣಿಗೆ ಕಾಣಬಹುದಾಗಿದೆ ಎಂದು  ಹೇಳಿದ್ದಾರೆ.

ಕಳೆದ ಬಾರಿ ಮಾನ್ಸೂನ್ ಮಳೆ ಶೇ.70 ಮಳೆ ಸುರಿಸಿತ್ತು. ಹೀಗಾಗಿ ಭತ್ತ, ಕಬ್ಬು, ಜೋಳ ಮತ್ತು ಹತ್ತಿಯಂತಹ ಬೆಳಗಳ ಇಳುವರಿಯಲ್ಲಿ ಇಳಿಕೆಯಾಗಿತ್ತು. ಆದರೆ ಈ ಬಾರಿ ಹವಾಮಾನದಲ್ಲಿ ಸಕಾರಾತ್ಮಕ ಬದಲಾವಣೆಯಾಗಿದ್ದು,  ಶೇ.96ರಷ್ಟು ಮಳೆಯನ್ನು ನಾವು ನಿರೀಕ್ಷಿಸಬಹುದಾಗಿದೆ. ಏಪ್ರಿಲ್ 18 ರ ಬಳಿಕದ ವಾತಾವರಣ ಮಳೆಗೆ ಪೂರಕವಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಕೆಜೆ ರಮೇಶ್ ತಿಳಿಸಿದ್ದಾರೆ.

ಮೇ-29 ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ, ಈ ವರ್ಷ ಉತ್ತಮ ಮುಂಗಾರು ಮಳೆ ನಿರೀಕ್ಷೆ
ಈ ವರ್ಷದ ಮುಂಗಾರು ಮಳೆ ಮೇ 29 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಕರ್ನಾಟಕ ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.  ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ  ಜೂನ್ 1ರಂದು ನೈರುತ್ಯ ಮುಂಗಾರು ಮಾರುತ ಕೇರಳ ಪ್ರವೇಶಿಸಲಿದೆ, ಅದಾದ ನಾಲ್ಕು ಅಥವಾ ಐದು ದಿನಗಳ ನಂತರ ಕರ್ನಾಟಕ ಒಳನಾಡು ಪ್ರವೇಶಿಸಲಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com