ಜಮ್ಮು ಮತ್ತು ಕಾಶ್ಮೀರ: ಸೇನಾಧಿಕಾರಿಯನ್ನು ಅಪಹರಿಸಿ ಗುಂಡಿಟ್ಟು ಕೊಂದ ಉಗ್ರರು!

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಕುಟುಂಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಾರತೀಯ ಸೇನಾಧಿಕಾರಿಯನ್ನು ಅಪಹರಿಸಿ ಗುಂಡಿಟ್ಟು ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಕುಟುಂಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಾರತೀಯ ಸೇನಾಧಿಕಾರಿಯನ್ನು ಅಪಹರಿಸಿ ಗುಂಡಿಟ್ಟು ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಸೇನಾಧಿಕಾರಿ ಉಮರ್ ಫಯಾಜ್ ಮೃತದೇಹ ಮತ್ತೆಯಾಗಿದ್ದು, ದೇಹಕ್ಕೆ ಹಲವು ಬಾರಿ ಗುಂಡಿಕ್ಕಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಉಮರ್ ಫಯಾಜ್ ಅವರು  ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಈ ವೇಳೆ ಅವರು ಏಕಾಂಗಿಯಾಗಿದ್ದ ಸಂದರ್ಭದಲ್ಲಿ ಉಗ್ರರು ಅವರನ್ನು ಅಪಹರಿಸಿದ್ದಾರೆ. ಬಳಿಕ ಅವರನ್ನು ಗುಂಡಿಟ್ಟು ಕೊಂದು ಶೋಪಿಯಾನ್ ನಲ್ಲಿ ಬಿಸಾಡಿ  ಹೋಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಕಳೆದವಾರವಷ್ಟೇ ಇದೇ ಶೋಪಿಯಾನ್ ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಹಲವು ನಾಗರಿಕರು ಗಾಯಗೊಂಡಿದ್ದರು. ಈ ಘಟನೆ ಬಳಿಕ ಶೋಪಿಯಾನ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾರಿ ಪ್ರಮಾಣದ  ಸೇನಾ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮತ್ತೆ ಉಗ್ರರು ನುಸುಳಿದ್ದು, ಸೇನೆ ವಿರುದ್ಧ ದಾಳಿ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com