ಫ್ರಾನ್ಸ್ ನ ನಿಯೋಜಿತ ಅಧ್ಯಕ್ಷ ಮಾರ್ಕನ್ ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಫ್ರಾನ್ಸ್ ನ ನಿಯೋಜಿತ ಅಧ್ಯಕ್ಷ ಇಮ್ಯಾನುಯಲ್ ಮಾರ್ಕನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ನವದೆಹಲಿ: ಫ್ರಾನ್ಸ್ ನ ನಿಯೋಜಿತ ಅಧ್ಯಕ್ಷ ಇಮ್ಯಾನುಯಲ್ ಮಾರ್ಕನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ-ಫ್ರಾನ್ಸ್ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಇಮ್ಯಾನುಯಲ್ ಮಾರ್ಕ್ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಳೆದ ವಾರ ಇಮ್ಯಾನಿಯಲ್ ಮಾರ್ಕನ್ ಫ್ರಾನ್ಸ್ ನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು.
ಇನ್ವೆಸ್ಟ್ ಮೆಂಟ್ ಬ್ಯಾಂಕರ್ ಆಗಿದ್ದ 39 ವರ್ಷದ ಇಮ್ಯಾನುಯಲ್ ಮಾರ್ಕ್ ಫ್ರಾನ್ಸ್ ನ ಅತ್ಯಂತ ಕಿರಿಯ ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.