ಇವಿಎಂ ಗೋಲ್ ಮಾಲ್: ಚುನಾವಣಾ ಆಯೋಗದ ಕದ ತಟ್ಟಿದ ಆಪ್

ಇವಿಎಂ (ವಿದ್ಯುನ್ಮಾನ ಮತಯಂತ್ರ)ದ ವಿರುದ್ಧ ಆರೋಪ ವ್ಯಕ್ತಪಡಿಸುತ್ತಿರುವ ಆಮ್ ಆದ್ನಿ ಪಕ್ಷದ ಹಿರಿಯ ನಾಯಕರು ಗುರುವಾರ ಚುನಾವಣಾ ಆಯೋಗದ ಅಧಿಕಾರಿಗಳನ್ನು...
ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸೋಮನಾಥ್ ಭಾರತಿ
ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸೋಮನಾಥ್ ಭಾರತಿ
ನವದೆಹಲಿ: ಇವಿಎಂ (ವಿದ್ಯುನ್ಮಾನ ಮತಯಂತ್ರ)ದ ವಿರುದ್ಧ ಆರೋಪ ವ್ಯಕ್ತಪಡಿಸುತ್ತಿರುವ ಆಮ್ ಆದ್ನಿ ಪಕ್ಷದ ಹಿರಿಯ ನಾಯಕರು ಗುರುವಾರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. 
ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸೋಮನಾಥ್ ಭಾರತಿ ಅವರ ನೇತೃತ್ವದಲ್ಲಿ ಇಂದು ಆಪ್ ನಾಯಕರು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಚುನಾವಣಾಧಿಕಾರಿಗಳನ್ನು ಭೇಟಿಯಾದ ಬಳಿಕ ಮಾಥ್ಯಮಗಳೊಂದಿಗೆ ಮಾತನಾಡಿರುವ ಸೋಮನಾಥ್ ಭಾರತಿ ಅವರು, ಚುನಾವಣಾ ಆಯೋಗದ ಅಧಿಕಾರಿಗಳ ಭೇಟಿ ತೃಪ್ತಿ ತಂದಿದೆ. ಜನರ ವಿಶ್ವಾಸ ಗೆಲ್ಲಲು ಪ್ರಜಾಪ್ರಭುತ್ವದಲ್ಲಿ ಪಾರದರ್ಶಕತೆಯ ಅಗತ್ಯವಿದೆ ಎಂದು ಹೇಳಿದ್ದಾರೆ. 
ನಾಳೆ ಸರ್ವಪಕ್ಷ ನಡೆಯಲಿದ್ದು, ಸಭೆಯಲ್ಲಿ ಇವಿಎಂ ವಿಚಾರವನ್ನು ಪ್ರಸ್ತಾಪ ಮಾಡಲಾಗುತ್ತದೆ ಎಂದು ಇದೇ ವೇಳೆ ಸೋಮನಾಥ್ ಭಾರತಿ ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com