ಆಧಾರ್ ಕಾರ್ಡ್-ಪ್ಯಾನ್ ಕಾರ್ಡ್
ದೇಶ
ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಐಟಿ ಇಲಾಖೆಯಿಂದ ಹೊಸ ಸೌಲಭ್ಯ
ಆದಾಯ ತೆರಿಗೆ ಬಗ್ಗೆ ಮಾಹಿತಿ ಸಲ್ಲಿಸುವುದು ಕಡ್ಡಾಯವಾಗಿದ್ದು, ಆದಾಯ ತೆರಿಗೆ ಇಲಾಖೆ(ಐಟಿ) ಇಲಾಖೆ ವ್ಯಕ್ತಿಯ ಆಧಾರ್ ಕಾರ್ಡ್ ನ್ನು ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಆದಾಯ ಹೊಸ ಇ-ಸೌಲಭ್ಯವನ್ನು ಜಾರಿಗೊಳಿಸಿದೆ.
ನವದೆಹಲಿ: ಆದಾಯ ತೆರಿಗೆ ಬಗ್ಗೆ ಮಾಹಿತಿ ಸಲ್ಲಿಸುವುದು ಕಡ್ಡಾಯವಾಗಿದ್ದು, ಆದಾಯ ತೆರಿಗೆ ಇಲಾಖೆ(ಐಟಿ) ಇಲಾಖೆ ವ್ಯಕ್ತಿಯ ಆಧಾರ್ ಕಾರ್ಡ್ ನ್ನು ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಆದಾಯ ಹೊಸ ಇ-ಸೌಲಭ್ಯವನ್ನು ಜಾರಿಗೊಳಿಸಿದೆ.
ಐಟಿ ಇಲಾಖೆಯ ಇ-ಫೈಲಿಂಗ್ ವೆಬ್ ಸೈಟ್ ನಲ್ಲಿ ಹೊಸ ಲಿಂಗ್ ನ್ನು ನೀಡಲಾಗಿದ್ದು, ಇದರಲ್ಲಿ ಆಧಾರ್ ಕಾರ್ಡ್ ನ್ನು ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಸಾಧ್ಯವಿದೆ. ಆಧಾರ್ ಕಾರ್ಡ್ ನಂಬರ್, ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನಲ್ಲಿರುವ ನಂಬರ್ ನ್ನು ವೆಬ್ ಸೈಟ್ ನಲ್ಲಿ ನಮೂದಿಸುವ ಮೂಲಕ ಆಧಾರ್ ಕಾರ್ಡ್ ನ್ನು ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಬಹುದಾಗಿದೆ.
ಯುಐಡಿಎಐ ನಿಂದ ಪರಿಶೀಲನೆಯ ಬಳಿಕ ಲಿಂಕಿಂಗ್ ಯಶಸ್ವಿಯಾಗಲಿದೆ. ಒಂದು ವೇಳೆ ಗ್ರಾಹಕರು ನೀಡಿರುವ ಮಾಹಿತಿ ಹೊಂದಾಣಿಕೆಯಾಗದೇ ಇದ್ದರೆ, ಒಟಿಪಿ ಅಗತ್ಯವಿರುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.
2017 ರ ಹಣಕಾಸು ಕಾಯ್ದೆಯಡಿಯಲ್ಲಿ ಆದಾಯ ತೆರಿಗೆ ಕುರಿತ ಮಾಹಿತಿಯನ್ನು ಸಲ್ಲಿಕೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ(ಐಟಿ) ಇಲಾಖೆ ವ್ಯಕ್ತಿಯ ಆಧಾರ್ ಕಾರ್ಡ್ ನ್ನು ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಇ-ಸೌಲಭ್ಯವನ್ನು ಜಾರಿಗೊಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ