ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರದಿಂದ 2 ದಿನಗಳ ಕಾಲ ನೆರೆಯ ರಾಷ್ಟ್ರ ಶ್ರೀಲಂಕಾ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿನ ಬೌದ್ಧರ ಸುಪ್ರಸಿದ್ಧ ಸಮಾರಂಭವಾದ 'ವೈಶಾಕ ದಿನ' ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರದಿಂದ 2 ದಿನಗಳ ಕಾಲ ನೆರೆಯ ರಾಷ್ಟ್ರ ಶ್ರೀಲಂಕಾ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿನ ಬೌದ್ಧರ ಸುಪ್ರಸಿದ್ಧ ಸಮಾರಂಭವಾದ 'ವೈಶಾಕ ದಿನ' ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಲಂಕಾ ರಾಜಧಾನಿ ಕೊಲಂಬೋದಲ್ಲಿ ಮೇ.12-14ರವರೆಗೂ ನಡೆಯಲಿರುವ ಅಂತರಾಷ್ಟ್ರೀ ವೈಶಾಕ ದಿನ ಆಚರಣೆಯಲ್ಲಿ 100 ರಾಷ್ಟ್ರಗಳ 400ಕ್ಕೂ ಹೆಚ್ಚು ಪ್ರತಿನಿಧಿಗಳನ್ನೊಳಗೊಂಡ ಅಂತರಾಷ್ಟ್ರೀಯ ಬೌದ್ಧರ ಸಮ್ಮೇಳನ ಸಹ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಶ್ರೀಲಂಕಾ ಪ್ರವಾಸ ಕುರಿತಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದಿರುವ ಪ್ರಧಾನಿ ಮೋದಿಯವರು, ಇದು ಎರಡು ವರ್ಷಗಳಲ್ಲಿ ಇದು ಎರಡನೇ ಭೇಟಿಯಾಗಿದ್ದು, ಉಭಯ ರಾಷ್ಟ್ರಗಳ ನಡುವಿನ ಉತ್ತಮ ಬಾಂಧವ್ಯವನ್ನು ಇದು ಸೂಚಿಸುತ್ತದೆ ಎಂದು ಹೇಳಿದ್ದಾರೆ.
ಭೇಟಿ ವೇಳೆ ಮೇ.12 ರಂದು ಕೊಲಂಬೋದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ವೈಶಾಕ ದಿನಾಚರಣೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಈ ವೇಳೆ ಬೌದ್ಧ ಧರ್ಮದ ಆಧ್ಯಾತ್ಮಿಕ ನಾಯಕರು, ವಿದ್ವಾಂಸರು ಮತ್ತು ದೈವಾಂಶ ಸಂಭೂತರೊಂದಿಗೆ ಮಾತುಕತೆ ನಡೆಸಲಿದ್ದೇನೆ. ಭೇಟಿಯಿಂದ ಉಭಯ ರಾಷ್ಟ್ರಗಳ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದು ತಿಳಿಸಿದ್ದಾರೆ.