ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಬಳಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಎಲ್ ಒಸಿ ಬಳಿ ಇರುವ ಎಲ್ಲಾ ಶಾಲೆಗಳನ್ನು ಗುರುವಾರ ಬಂದ್ ಮಾಡಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ರಾಜೌರಿಯ ಎಲ್ ಒಸಿ ಸಮೀಪವಿರುವ ಎಲ್ಲಾ ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ನಿನ್ನೆ ಸಂಜೆ ನೌಶೆರಾ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ ಮೃತಪಟ್ಟಿರುವುದಾಗಿ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನಿಶ್ ಮೆಹ್ತಾ ಅವರು ಹೇಳಿದ್ದರು.