ಕಾಶ್ಮೀರ: ಭದ್ರತಾ ಪಡೆ, ಪ್ರತಿಭಟನಾಕಾರರ ನಡುವೆ ಘರ್ಷಣೆ

ದಕ್ಷಿಣ ಕಾಶ್ಮೀರದ ಶೋಪಿಯಾನ್ ಟೌನ್ ಮತ್ತು ಶ್ರೀನಗನರ ನೌಶೆರಾ ಬಳಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ಶುಕ್ರವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಟೌನ್ ಮತ್ತು ಶ್ರೀನಗನರ ನೌಶೆರಾ ಬಳಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಶುಕ್ರವಾರವಾದ್ದರಿಂದ ನೌಶೆರಾದಲ್ಲಿರುವ ಜಾಮಿಯಾ ಮಸೀದಿಗೆ ಪ್ರಾರ್ಥನೆ ಸಲ್ಲಿಸಲು ಜನರು ಆಗಮಿಸಿದ್ದು. ಈ ವೇಳೆ ಕೆಲ ಯುವಕರ ಗುಂಪು ಘೋಷಣೆಗಳನ್ನು ಕೂಗಿದ್ದು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಪ್ರತಿಭಟನಾಕಾರರನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ. 
ಇದರಂತೆಯೇ ಶೋಪಿಯಾನ್ ಜಿಲ್ಲೆ ಸಿಂಗ್ಲು ಚೌಕ್ ಹಾಗೂ ಬಂಡಿಪೋರ ಜಿಲ್ಲೆಯಲ್ಲಿಯೂ ಭಧ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿರುವುದಾಗಿ ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com