ಸಂಗ್ರಹ ಚಿತ್ರ
ದೇಶ
ಗಡಿ ಉದ್ವಿಗ್ನ: ಜಮ್ಮುವಿನಲ್ಲಿ ಅನಿರ್ದಿಷ್ಟಾವಧಿಗೆ ಶಾಲಾ-ಕಾಲೇಜುಗಳು ಬಂದ್
ಜಮ್ಮುವಿನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಗಡಿಯಲ್ಲಿ ಉದ್ವಿಗ್ನ ವಾತಾವರಣ ಮುಂದುವರೆಯುತ್ತಿರುವ ಹಿನ್ನಲೆಯಲ್ಲಿ ಗಡಿಯಲ್ಲಿರುವ ಶಾಲಾ-ಕಾಲೇಜುಗಳನ್ನು...
ಜಮ್ಮು: ಜಮ್ಮುವಿನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಗಡಿಯಲ್ಲಿ ಉದ್ವಿಗ್ನ ವಾತಾವರಣ ಮುಂದುವರೆಯುತ್ತಿರುವ ಹಿನ್ನಲೆಯಲ್ಲಿ ಗಡಿಯಲ್ಲಿರುವ ಶಾಲಾಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.
ಈ ಕುರಿತಂತೆ ಜಮ್ಮು ಮತ್ತು ಕಾಶ್ಮೀರ ಉಪ ಆಯುಕ್ತರಾದ ಶಾಹಿದ್ ಚೌಧರಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಜಮ್ಮುವಿನ ನೌಶೆರಾ, ಕಿಲಾ ದರ್ಹಾಲ್ ಮತ್ತು ಮಂಜಕೋಟೆಯ ಗಡಿ ನಿಯಂತ್ರಣ ರೇಖೆ ಬಳಿಯಿರುವ ಎಲ್ಲಾ ಶಾಲೆ ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗಿದೆ ಎಂದು ಚೌಧರಿ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದಲೂ ಪ್ರತೀನಿತ್ಯ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಇಂದೂ ಕೂಡ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇಂದು ನಡೆಸಿದ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, ಓರ್ವ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಗಡಿಯಲ್ಲಿರುವ ಶಾಲಾಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ