ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಳಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾ ಪಡೆ ಕಾರ್ಯಾಚರಣೆಗಿಳಿದಿದೆ ಎಂದು ಶನಿವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾ ಪಡೆ ಕಾರ್ಯಾಚರಣೆಗಿಳಿದಿದೆ ಎಂದು ಶನಿವಾರ ಮೂಲಗಳು ತಿಳಿಸಿವೆ. 
ಪುಲ್ವಾಮ ಜಿಲ್ಲೆಯ ಟ್ರಾಲ್ ಟೌನ್ ಶಿಪ್'ನಲ್ಲಿರುವ ಸೀರ್ ಗ್ರಾಮದಲ್ಲಿ ಸೇನಾಪಡೆ ಗಸ್ತು ತಿರುಗುತ್ತಿದ್ದ ವೇಳೆ ಉಗ್ರ ಗುಂಪೊಂದು ಇದ್ದಕ್ಕಿದ್ದಂತೆ ಸೇನಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಪ್ರಸ್ತುತ ಸ್ಥಳದ ಸುತ್ತಲೂ ಸೇನೆ ಸುತ್ತವರೆದಿದ್ದು, ಉಗ್ರರನ್ನು ಸದೆಬಡಿಯಲು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. 
ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಸೇನಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿಗಳು ನಡೆಸುತ್ತಿದ್ದು, ಉಗ್ರರು ತಪ್ಪಿಸಿಕೊಳ್ಳದಂತೆ ನಾಕಾಬಂಧಿ ರಚಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com