ಗಡಿಯಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಪಾಕಿಸ್ತಾನ ಸೇನೆ ನಿರಂತರವಾಗಿ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಲೇ ಇದ್ದು, ನಾಗರಿಕ ಪ್ರದೇಶ ಹಾಗೂ ಭಾರತೀಯ ಸೇನಾಪಡೆಗಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸುತ್ತಲೇ ಇದೆ. ಅಪ್ರಚೋದಿತ ಗುಂಡು ಹಾಗೂ ಶೆಲ್ ಗಳ ದಾಳಿ ಪರಿಣಾಮ ಗಡಿಯಲ್ಲಿನ ಆಸ್ತಿಪಾಸ್ತಿಗಳಿಗೆ ಅಪಾರ ಪ್ರಮಾಣ ಹಾನಿಯುಂಟಾಗಿದೆ ಎಂದು ಹೇಳಲಾಗುತ್ತಿದೆ.