ಏಳು ಮಂದಿಯಿಂದ ಮಹಿಳೆಯ ಮೇಲೆ ಗ್ಯಾಂಗ್ ರೇಪ್: ಬರ್ಬರ ಕೊಲೆ

23 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬರ್ಬರವಾಗಿ ಕೊಲೆ ಮಾಡಿರುವ ಘಟನೆ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ರೋಹ್ಟಕ್ : 23 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರೋಹ್ಟಕ್ ಜಿಲ್ಲೆಯಲ್ಲಿ ನಡೆದಿದೆ.
ಏಳು ಜನ ಕಾಮುಕರ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಅತ್ಯಾಚಾರದ ನಂತರ ಸಂತ್ರಸ್ಥೆಯ ತಲೆಯನ್ನು ಇಟ್ಟಿಗೆಯಿಂದ ಜಜ್ಜಲಾಗಿದೆ.
ಯುವತಿಯನ್ನು ಹತ್ಯೆಗೈಯಲು ಮೂಲಕ ಕಾರಣ ಆಕೆ ಯುವಕನೊಂದಿಗೆ ಮದುವೆ ನಿರಾಕರಿಸಿದ್ದು. ಮದುವೆಯಾಗಲೇಬೇಕೆಂದು ದುಂಬಾಲು ಬಿದ್ದಿದ್ದ ಯುವಕ ಆಕೆಯ ಮನೆಗೆ ಬಂದಾಗ ಆತನ ಕಪಾಳಕ್ಕೆ ಯುವತಿ ಹೊಡೆದಿದ್ದಳು.
ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದ ಆಕೆ ಕೆಲಸ ಮಾಡುತ್ತಿದ್ದ ಫ್ಯಾಕ್ಟರಿ ಗೇಟಿನ ಬಳಿಯಿಂದ ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆಗೈದಿದ್ದಾರೆ. ಒಟ್ಟು ಏಳು ಜನ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜೊತೆಗೆ ಆಕೆಯ ಗುಪ್ತಾಂಗಕ್ಕೆ ಚೂಪಾದ ಆಯುಧಗಳಿಂದ ಇರಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಿಗಳ ಬಂಧನಕ್ಕೆ ರೋಹ್ಟಕ್ ಪೊಲೀಸರು ಬಲೆ ಬೀಸಿದ್ದಾರೆ. 
ಸೋನಿಪತ್ ನಿಂದ ಮೇ 9 ರಂದು ಮಹಿಳೆಯನ್ನು ಕಾರಿನಲ್ಲಿ ಅಪಹರಿಸಲಾಗಿತ್ತು. ಈ ಬಗ್ಗೆ ಮಹಿಳೆಯ ಪೊಷಕರು ದೂರು ದಾಖಲಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com