ಬಿಹಾರ: ಮಧ್ಯಾಹ್ನದ ಬಿಸಿ ಊಟದಲ್ಲಿ ಸತ್ತ ಹಲ್ಲಿ ಪತ್ತೆ, 27 ಮಕ್ಕಳು ಅಸ್ವಸ್ಥ

ಹರಿಯಾಣದ ಫರಿದಾಬಾದ್ ನಲ್ಲಿ ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ ಪತ್ತೆಯಾದ ಬೆನ್ನಲ್ಲೇ ಬಿಹಾರದಲ್ಲಿ ಸೋಮವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಪಾಟ್ನಾ: ಹರಿಯಾಣದ ಫರಿದಾಬಾದ್ ನಲ್ಲಿ ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ ಪತ್ತೆಯಾದ ಬೆನ್ನಲ್ಲೇ ಬಿಹಾರದಲ್ಲಿ ಸೋಮವಾರ ಮಧ್ಯಾಹ್ನ ಬಿಸಿ ಊಟದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದ್ದು, ಊಟ ಮಾಡಿದ 27 ಮಕ್ಕಳು ಅಸ್ವಸ್ಥರಾಗಿದ್ದಾರೆ.
ಬಿಹಾರದ ಜಮುಯಿಯಲ್ಲಿ ಇಂದು ಈ ಘಟನೆ ನಡೆದಿದ್ದು, ಅಸ್ವಸ್ಥ ಮಕ್ಕಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಗುರುವಾರ ಫರಿದಾಬಾದ್ ನ ರಾಜಕೀಯ ಬಾಲಕೀಯರ ಹಿರಿಯ ಮಾಧ್ಯಮಿಕ ಶಾಲೆಯ ಮಕ್ಕಳಿಗೆ ನೀಡಲಾದ ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ ಪತ್ತೆಯಾಗಿತ್ತು. ಆದರೆ, ಅಷ್ಟೊತ್ತಿಗಾಗಾಲೇ ಮಕ್ಕಳಿಗೆ ಈ ಬಿಸಿಯೂಟವನ್ನು ಬಡಿಸಲಾಗಿತ್ತು. ಕೆಲ ಮಕ್ಕಳು ಇದೇ ಬಿಸಿಯೂಟವನ್ನು ಸೇವಿಸಿದ್ದರು. ಆಗ ಶಿಕ್ಷಕರು ತಕ್ಷಣವೇ ಮಕ್ಕಳಿಗೆ ಊಟ ಸೇವಿಸದಂತೆ ತಡೆದಿದ್ದಾರೆ. ಇದರ ಮಧ್ಯೆಯೇ ಕೆಲ ಮಕ್ಕಳು ಈ ವಿಷ ಆಹಾರ ಸೇವಿಸುತ್ತಿದ್ದಂತೆ ವಾಂತಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com