ಇಗ್ನೊ ಪ್ರವೇಶ ಪ್ರಕ್ರಿಯೆ ಆರಂಭ

ಜುಲೈಯಿಂದ 173 ಕೋರ್ಸ್ ಗಳ ಪ್ರವೇಶಕ್ಕೆ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ...
ಇಂಧಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ
ಇಂಧಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ
ನವದೆಹಲಿ: ಜುಲೈಯಿಂದ 173 ಕೋರ್ಸ್ ಗಳ ಪ್ರವೇಶಕ್ಕೆ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಿದೆ.
ಸ್ನಾತಕೋತ್ತರ, ಪದವಿ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಜೂನ್ 30 ಆಗಿದೆ ಎಂದು ವಿಶ್ವವಿದ್ಯಾಲಯದ ಹೇಳಿಕೆ ತಿಳಿಸಿದೆ.
ವಿಜ್ಞಾನ, ಸಮಾಜ ವಿಜ್ಞಾನ, ಮಾನವಿಕ ಮತ್ತು ಮ್ಯಾನೇಜ್ ಮೆಂಟ್ ಇತ್ಯಾದಿ ಕೋರ್ಸ್ ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾಲಯದ ವೆಬ್ ಸೈಟ್ www.ignou.ac.in ನಲ್ಲಿ ಪರಿಶೀಲಿಸಬಹುದು.
ಪರ್ಫಾರ್ಮಿಂಗ್ ಅಂಡ್ ವಿಷುವಲ್ ಆರ್ಟ್ಸ್, ಇಂಟರ್ ಅಂಡ್ ಟ್ರಾನ್ಸ್ ಡಿಸಿಪ್ಲಿನರಿ ಸ್ಟಡೀಸ್, ಅನುವಾದ, ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಎಕ್ಸ್ಟೆನ್ಷನ್ ಅಂಡ್ ಡೆವೆಲಪ್ ಮೆಂಟ್ ಸ್ಟಡೀಸ್, ವಿದೇಶಿ ಭಾಷೆಗಳು, ಪತ್ರಿಕೋದ್ಯಮ ಮತ್ತು ಹೊಸ ಮಾಧ್ಯಮ ಅಧ್ಯಯನ, ರಜಾ ಕಲಿಕಾ ಕೋರ್ಸ್ ಗಳು ಮತ್ತು ತರಬೇತಿ ಇತ್ಯಾದಿಗಳು ವಿಶ್ವವಿದ್ಯಾಲಯದಲ್ಲಿ ಹೊಸದಾಗಿ ಆರಂಭವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com