ಕಾಶ್ಮೀರದಲ್ಲಿ 5,300 ಪೊಲೀಸ್ ಪೇದೆ ಹುದ್ದೆಗೆ 1 ಲಕ್ಷ ಅರ್ಜಿ

ಹಿಂಸಾಚಾರ ಪೀಡಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಹಿಂಸಾಚಾರ ಪೀಡಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರ ಕಲ್ಲು ತೂರಾಟ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದೆ.
ಈ ಮಧ್ಯೆ ಪೊಲೀಸರ ಕೊರತೆಯನ್ನು ನೀಗಿಸಿಕೊಳ್ಳಲು ಮುಂದಾಗಿರುವ ಕಾಶ್ಮೀರ ಸರ್ಕಾರ, ಹಿಂಸಾಚಾರ ಪೀಡಿತ ದಕ್ಷಿಣ ಕಾಶ್ಮೀರ ಸೇರಿದಂತೆ ಕಣಿವೆ ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಪೇದೆಗಳ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಒಟ್ಟು 5,300 ಪೊಲೀಸ್ ಪೇದೆ ಹುದ್ದೆಗಳಿಗೆ ಒಟ್ಟು 1 ಲಕ್ಷ ಅರ್ಜಿಗಳು ಬಂದಿವೆ. ಈ ಪೈಕಿ ದಕ್ಷಿಣ ಕಾಶ್ಮೀರದಿಂದ ಸುಮಾರು 1,400 ಯುವಕ, ಯುವತಿಯರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಭಾನುವಾರ ಹಾಜರಾಗಿದ್ದಾರೆ.
ಪೊಲೀಸ್ ನೇಮಕಾತಿಗೆ ಯುವಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಶಶಸ್ತ್ರ ಪೊಲೀಸ್ ಪಡೆ ಸೇರಿದಂತೆ ಒಟ್ಟು 5,300 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ನೇಮಕಾತಿ ಮಂಡಳಿಯ ಅಧ್ಯಕ್ಷ ಸುರಿಂದರ್ ಕುಮಾರ್ ಗುಪ್ತಾ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com