ಬೇನಾಮಿ ಆಸ್ತಿ: ಲಾಲು ಪ್ರಸಾದ್ ಯಾದವ್ ಆಪ್ತರ ಮನೆ ಮೇಲೆ ಐಟಿ ದಾಳಿ

ಸಾವಿರಾರು ಕೋಟಿ ಭೂಹಗರಣ, ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್ ಅವರ ಆಪ್ತರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್
ನವದೆಹಲಿ: ಸಾವಿರಾರು ಕೋಟಿ ಭೂಹಗರಣ, ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್ ಅವರ ಆಪ್ತರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 
ಲಾಲು ಪ್ರಸಾದ್ ಯಾದವ್ ಅವರಿಗೆ ಸಂಬಂಧಿಸಿದ ಒಟ್ಟು 1,000 ಕೋಟಿ ರೂಪಾಯಿ ಮೊತ್ತದ ಬೇನಾಮೆ ಡೀಲ್ ಗೆ ಸಂಬಂಧಿಸಿದ ದಾಳಿ ಇದಾಗಿದ್ದು, ದೆಹಲಿಯ ಕನಿಷ್ಠ 22 ಕಡೆಗಳಲ್ಲಿ ದಾಳಿ ನಡೆದಿದೆ.  ದೆಹಲಿ ಗುರ್ಗಾಂವ್, ರೆವಾರಿ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಪ್ರಮುಖ ಉದ್ಯಮಿಗಳು ರಿಯಲ್ ಎಸ್ಟೇಟ್ ಏಜೆಂಟರ ಮನೆ ಮೇಲೆ ದಾಳಿ ನಡೆಸಿರುವುದಾಗಿ ಐಟಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 
ಇದೇ ವೇಳೆ ಆರ್ ಜೆಡಿ ಸಂಸದ ಪಿಸಿ ಗುಪ್ತಾ ಅವರ ಪುತ್ರ ಹಾಗೂ ಇನ್ನು ಅನೇಕ ಉದ್ಯಮಿಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದ್ದು, ಬೇನಾಮಿ ಡೀಲ್ ನಲ್ಲಿ ತೊಡಗಿದ್ದ ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ಸದಸ್ಯರು, ಆಪ್ತರ ಮನೆ ಮೇಲೂ ದಾಳಿ ನಡೆಸಲಾಗಿದ್ದು, ಸಾವಿರಾರು ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸುಮಾರು ಐಟಿ ಇಲಾಖೆಯ 100 ಸಿಬ್ಬಂದಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಈ ದಾಳಿ ನಡೆಸಿದ್ದಾರೆ ಎಂದು ಐಟಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com