ಲಾಲು ವಿರುದ್ಧ ಬಿಜೆಪಿ ಬಳಿ ಸಾಕ್ಷ್ಯ ಇದ್ದರೆ ಕೋರ್ಟ್ ಗೆ ಹೋಗಲಿ: ನಿತಿಶ್ ಕುಮಾರ್

ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಕುಟುಂಬದ ವಿರುದ್ಧದ ಸಾವಿರಾರು...
ನಿತಿಶ್ ಕುಮಾರ್
ನಿತಿಶ್ ಕುಮಾರ್
ಪಾಟ್ನಾ: ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಕುಟುಂಬದ ವಿರುದ್ಧದ ಸಾವಿರಾರು ಕೋಟಿ ರುಪಾಯಿ ಭೂಹಗರಣ, ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು, ಲಾಲು ವಿರುದ್ಧ ಬಿಜೆಪಿ ಬಳಿ ಸೂಕ್ತ ದಾಖಲೆಗಳಿದ್ದರೆ ಕೋರ್ಟ್ ಗೆ ಹೋಗಲಿ ಎಂದು ಮಂಗಳವಾರ ಹೇಳಿದ್ದಾರೆ.
ಆರ್ ಜೆಡಿ ಮುಖ್ಯಸ್ಥ ಲಾಲು ಹಾಗೂ ಅವರ ಮಕ್ಕಳು ಶೆಲ್ ಕಂಪನಿಗಳ ಮೂಲಕ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಸುಶಿಲ್ ಮೋದಿ ಹಾಗೂ ಖಾಸಗಿ ಸುದ್ದಿ ವಾಹಿನಿಯೊಂದು ಆರೋಪಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರ ಸಿಎಂ, ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ತನಿಖೆ ಆದೇಶಿಸುವ ಅಧಿಕಾರ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಇದೆ. ಹೀಗಾಗಿ ಈ ಕುರಿತು ಮೂರನೇ ವ್ಯಕ್ತಿ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದಿದ್ದಾರೆ.
ರಾಜ್ಯ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುತ್ತಾ? ಎಂಬ ಪ್ರಶ್ನೆಗೆ ಉತ್ತರಿಸಿದ ನಿತಿಶ್ ಕುಮಾರ್, ಇದು ರಾಜ್ಯ ಸರ್ಕಾರ ಅಥವಾ ಬಿಹಾರ ಕಂಪನಿಗಳ ಕಾನೂನಿನ ಸಮಸ್ಯೆ ಅಲ್ಲ. ರಾಜ್ಯ ಸರ್ಕಾರದ ಉತ್ತಮ ಕೆಲಸಗಳನ್ನು ಸಹಿಸಿಕೊಳ್ಳದ ಕೆಲ ವ್ಯಕ್ತಿಗಳು ಅನಗತ್ಯವಾಗಿ ಪರಿಸರವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಮಧ್ಯೆ ಭೂಹಗರಣ ಹಾಗೂ ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಲಾಲು ಪ್ರಸಾದ್ ಯಾದವ್ ಅವರ ಆಪ್ತರ ಮನೆ ಮೇಲೆ ದಾಳಿ ನಡೆಸಿದೆ.
ಲಾಲು ಪ್ರಸಾದ್ ಯಾದವ್ ಅವರಿಗೆ ಸಂಬಂಧಿಸಿದ ಒಟ್ಟು 1,000 ಕೋಟಿ ರೂಪಾಯಿ ಮೊತ್ತದ ಬೇನಾಮೆ ಡೀಲ್ ಗೆ ಸಂಬಂಧಿಸಿದ ದಾಳಿ ಇದಾಗಿದ್ದು, ದೆಹಲಿಯ ಕನಿಷ್ಠ 22 ಕಡೆಗಳಲ್ಲಿ ದಾಳಿ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com