ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ತನ್ನ ವಾರ್ಷಿಕ ಸಭೆ ನಡೆಸಲು ನಿರ್ಧರಿಸಿದ್ದು, ಈ ಮೂಲಕ ಪ್ರತ್ಯೇಕವಾದಿಗಳಿಗೆ ಕಣಿವೆ ರಾಜ್ಯ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶ ನೀಡಲು ಮುಂದಾಗಿದೆ.
ಜುಲೈ 18ರಿಂದ 20ರವರೆಗೆ ನಡೆಯುವ ಮೂರು ದಿನಗಳ ಆರ್ಎಸ್ಎಸ್ ವಾರ್ಷಿಕ ಸಭೆಯಲ್ಲಿ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರತ್ಯೇಕವಾದಿಗಳಿಗೆ ಸ್ಪಷ್ಟ ಸಂದೇಶ ನೀಡುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಭೆ ನಡೆಸಲು ಸಂಘ ನಿರ್ಧರಿಸಿದೆ ಎಂದು ಆರ್ಎಸ್ಎಸ್ ಮೂಲಗಳು ತಿಳಿಸಿವೆ.
ಈ ಬಾರಿ ಕಾಶ್ಮೀರದಲ್ಲಿ ಸಭೆ ನಡೆಸುತ್ತಿರುವುದಾಗಿ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಚಾರಕ ಪ್ರಮುಖ ಮನಮೋಹನ್ ವೈದ್ಯ ಅವರು ಖಚಿತಪಡಿಸಿದ್ದಾರೆ.