ಬಾಲಾಕೋಟ್: ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ, ಸೇನೆಯಿಂದ ದಿಟ್ಟ ಉತ್ತರ

ಜಮ್ಮುಮತ್ತು ಕಾಶಅಮೀರದ ಬಾಲಾಕೋಟ್ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬಾಲಾಕೋಟ್: ಜಮ್ಮುಮತ್ತು ಕಾಶಅಮೀರದ ಬಾಲಾಕೋಟ್ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಕಳೆದ ರಾತ್ರಿ ಪಾಕಿಸ್ತಾನ ಸೇನೆ ಬಾಲಾಕೋಟ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆ ಮೇಲೆ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಸೇನಾ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾಧಿಕಾರಿ ಹೇಳಿದ್ದಾರೆ. 
ಕಳೆದ ನಾಲ್ಕು ದಿನಗಳಿಂದಲೂ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಒಂದಲ್ಲ ಒಂದು ಕಡೆ ಪಾಕಿಸ್ತಾನ ಭಾರತೀಯ ಸೇನೆ ಹಾಗೂ ನಾಗರಿಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಪದೇ ಪದೇ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಲೇ ಇದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com