ಟ್ಯಾಂಕರ್ ಹಗರಣ: ಎಸಿಬಿಯಿಂದ ಕೇಜ್ರಿವಾಲ್ ಖಾಸಗಿ ಕಾರ್ಯದರ್ಶಿಯ ವಿಚಾರಣೆ

400 ಕೋಟಿ ನೀರಿನ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಬುಧವಾರ...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: 400 ಕೋಟಿ ನೀರಿನ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಖಾಸಗಿ ಕಾರ್ಯದರ್ಶಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ.
ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳು ಕಳೆದ ವಾರ ಕೇಜ್ರಿವಾಲ್ ಅವರ ಖಾಸಗಿ ಕಾರ್ಯದರ್ಶಿ ಬಿಭವ್ ಕುಮಾರ್ ಅವರಿಗೆ ಸಮನ್ಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರನ್ನು ವಿಚಾರಣೆ ನಡೆಸಲಾಗಿದೆ.
ಇಂದು ಬೆಳಗ್ಗೆ 11.30ಕ್ಕೆ ಎಸಿಬಿ ಕಚೇರಿಗೆ ಆಗಮಿಸಿದ ಬಿಭವ್ ಕುಮಾರ್ ಅವರ ವಿಚಾರಣೆ ಇನ್ನು ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಆಮ್‌ ಆದ್ಮಿ ಪಕ್ಷದ ವಿರುದ್ಧ ಸಮರ ಸಾರಿರುವ ದೆಹಲಿಯ ಪದಚ್ಯುತ ಸಚಿವ ಕಪಿಲ್‌ ಮಿಶ್ರಾ ಅವರು ಎಸಿಬಿಗೆ ದೂರು ನೀಡಿದ್ದು, ನೀರಿನ ಟ್ಯಾಂಕರ್ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಎಸಿಬಿ ಮಿಶ್ರಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com