ನವದೆಹಲಿ: ಕೇಂದ್ರ ಸಚಿವ ಅನಿಲ್ ಮಾಧವ್ ದಾವೆ ಅವರ ನಿಧನದಿಂದ ತೆರವಾದ ಖಾತೆಯನ್ನು ಮತ್ತೊಬ್ಬ ಸಚಿವ ಡಾ.ಹರ್ಷವರ್ಧನ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಅನಿಲ್ ದಾವೆ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಹೊಂದಿದ್ದರು. ಹರ್ಷವರ್ಧನ್ ಅವರು ಪ್ರಸ್ತುತ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಭೂ ವಿಜ್ಞಾನ ಖಾತೆ ನಿರ್ವಹಿಸುತ್ತಿದ್ದಾರೆ. ಅವರಿಗೆ ಪರಿಸರ ಖಾತೆಯ ಹೊಣೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಲಿದ್ದಾರೆ.
ಅನಿಲ್ ದಾವೆಯವರ ಅಂತಿಮ ಕ್ರಿಯೆಗಳು ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆಯಲಿದೆ.